HomeGadag Newsಬಿಡಾಡಿ ದನ, ನಾಯಿಗಳ ನಿಯಂತ್ರಣಕ್ಕೆ ಆಗ್ರಹ

ಬಿಡಾಡಿ ದನ, ನಾಯಿಗಳ ನಿಯಂತ್ರಣಕ್ಕೆ ಆಗ್ರಹ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿಯ ಶಂಕ್ರಪ್ಪ ಹೋಳಿ ಬುಧವಾರ ಗದುಗಿನ ಹೊಸ ಬನಶಂಕರಿ ಗುಡಿ ಹತ್ತಿರ ಬೀದಿ ದನದ ದಾಳಿಯಿಂದ ಸಾವನ್ನಪ್ಪಿರುವ ಘಟನೆ ಮನಕಲಕುವಂತಿದೆ. ಇತ್ತೀಚೆಗೆ ನಗರದಲ್ಲಿ ಬೀದಿ ನಾಯಿಗಳು ಹಾಗೂ ಬೀದಿ ದನಗಳ ಹಾವಳಿ ಹೆಚ್ಚಾಗಿದ್ದು, ಸಾಕಷ್ಟು ಹಾನಿ ಸಂಭವಿಸಿದೆ.

ಕೂಡಲೇ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಇಂತಹ ಬೀದಿ ದನ, ಬೀದಿ ನಾಯಿಗಳ ಹಾವಳಿ ನಿಯಂತ್ರಿಸಬೇಕು ಎಂದು ಎಸ್.ಡಿ.ಪಿ.ಐ. ಪಕ್ಷದ ಗದಗ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಅನ್ವರ್ ಬಾಗೇವಾಡಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮುಂದೆ ಇಂತಹ ಘಟನೆಗಳು ನಡೆಯದ ಹಾಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಇಂತಹ ದಾಳಿಗೆ ಒಳಗಾಗಿ ಮೃತರಾದವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img