HomeBengaluru Newsಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅನುಮತಿ ಕೊಡಲ್ಲ: ಕಡ್ಡಿ ಮುರಿದಂತೆ ಹೇಳಿದ ಕಮಿಷನರ್ ದಯಾನಂದ್!

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅನುಮತಿ ಕೊಡಲ್ಲ: ಕಡ್ಡಿ ಮುರಿದಂತೆ ಹೇಳಿದ ಕಮಿಷನರ್ ದಯಾನಂದ್!

For Dai;y Updates Join Our whatsapp Group

Spread the love

ಬೆಂಗಳೂರು:- ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅನುಮತಿ ಕೊಡಲ್ಲ ಎಂದು ಕಡ್ಡಿ ಮುರಿದಂತೆ ಕಮಿಷನರ್ ದಯಾನಂದ್ ಹೇಳಿದ್ದಾರೆ.

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಶನಿವಾರದಿಂದ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿವೆ.

ಪಾದಯಾತ್ರೆ ಎಲ್ಲಿಂದ, ಯಾವ ರೀತಿ ಶುರು ಮಾಡುತ್ತಾರೆ ಎಂಬುದು ಇನ್ನೂ ಗೊತ್ತಿಲ್ಲ. ನಗರದಲ್ಲಿ ಪ್ರತಿಭಟನೆಗೆ, ರ‍್ಯಾಲಿಗೆ, ಪಾದಯಾತ್ರೆಗೆ ಅನುಮತಿ ಇಲ್ಲ. ಹೈಕೋರ್ಟ್ ಆದೇಶದ ಅನ್ವಯ ಅನುಮತಿ ಇಲ್ಲ. ಆದರೂ ಪೂರಕವಾಗಿ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳುತ್ತೇವೆ. ನನ್ನ ಮಟ್ಟದಲ್ಲಿ ಯಾರೂ ಬಂದು ಇದುವರೆಗೆ ಅನುಮತಿ ಕೇಳಿಲ್ಲ ಎಂದು ಅವರು ಹೇಳಿದರು.

ಬಿಜೆಪಿ ಜೆಡಿಎಸ್ ಪಾದಯಾತ್ರೆಗೆ ನಾವು ಅನುಮತಿ ನೀಡುವುದಿಲ್ಲ. ಅವರು ಮಾಡುವುದಿದ್ದರೆ ಮಾಡಿಕೊಳ್ಳಲಿ, ಅದರ ಬಗ್ಗೆ ನಮ್ಮ ತಕರಾರಿಲ್ಲ. ಆದರೆ, ಅಧಿಕೃತವಾಗಿ ಪೊಲೀಸ್ ಇಲಾಖೆಯಿಂದ ನಾವು ಅನುಮತಿ ನೀಡುವುದಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ ಕೆಲವೇ ದಿನಗಳ ಹಿಂದೆ ಕಡ್ಡಿಮುರಿದಂತೆ ಹೇಳಿದ್ದರು. ಇದೀಗ ನಗರ ಪೊಲೀಸ್ ಆಯುಕ್ತರೂ ಅದೇ ರೀತಿ ಹೇಳಿಕೆ ನೀಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!