ವಿಜಯಸಾಕ್ಷಿ ಸುದ್ದಿ, ಗದಗ : 2023ರ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿಗಳನ್ನು ಘೋಷಣೆ ಮಾಡುವಾಗ ಪರಿಶಿಷ್ಟ ಜಾತಿ/ಪಂಗಡಗಳ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ವಿಶೇಷ ಅನುದಾನವನ್ನು ಗ್ಯಾರಂಟಿಗಳಿಗೆ ಖರ್ಚು ಮಾಡುತ್ತೇವೆಂದು ಘೋಷಣೆ ಮಾಡಲಿಲ್ಲ. ಆದರೆ ರಾಜ್ಯ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಗ್ಯಾರಂಟಿ ಯೋಜನೆಗಳಿಗೆ ಮೀಸಲಿಟ್ಟ ಹಣದಲ್ಲಿ ಖರ್ಚು ಮಾಡುತ್ತಿರುವುದು ಖಂಡನೀಯ. ರಾಜ್ಯ ಸರ್ಕಾರ ಕೂಡಲೇ ಇದನ್ನು ನಿಲ್ಲಿಸಬೇಕೆಂದು ಆಗ್ರಹಿಸಿ ಸ್ಲಂ ಜನಾಂದೋಲನ-ಕರ್ನಾಟಕ ಮತ್ತು ಗದಗ ಜಿಲ್ಲಾ ಸ್ಲಂ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಂತ್ರಿಗಳಿಗೆ ಮನವಿ ಸಲ್ಲಿಸಿದರು.
ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ ಆರ್.ಮಾನ್ವಿ ಮಾತನಾಡಿ, ಯಾವುದೇ ಗ್ಯಾರಂಟಿ ಯೋಜನೆಗಳಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳು ಸೌಲಭ್ಯ ಪಡೆದಿರುವುದಕ್ಕೆ ಇಲಾಖೆಗಳಲ್ಲಿ ಮಾಹಿತಿ ಇಲ್ಲ. ಇಲಾಖೆಗಳು ನಿರ್ಮಾಣ ಮಾಡುವ ಹೊಸ ಕಟ್ಟಡಗಳಿಗೆ, ಕಟ್ಟಡ ದುರಸ್ಥಿಗಳಿಗೆ, ಶಾಲಾ-ಕಾಲೇಜು ಕಟ್ಟಡಗಳಿಗೆ, ಹಾಸ್ಟೆಲ್ ಕಟ್ಟಡಗಳಿಗೆ ಮತ್ತು ಇವುಗಳ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಉಪ ಹಂಚಿಕೆ ಹಣವನ್ನು ಖರ್ಚು ಮಾಡಲಾಗುತ್ತಿದೆ. ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅಡಿಯಲ್ಲಿ ಮೀಸಲಿಟ್ಟಿರುವ ಹಣ ಬಡತನ ನಿವಾರಣೆಗಾಗಿ ಇರುವ ಹಣವಲ್ಲ. ಹಾಗಾಗಿ ನಿಗದಿತ ಸಮಯದೊಳಗೆ ಪರಿಶಿಷ್ಟ ಜಾತಿಯವರ ಅಭಿವೃದ್ಧಿ ಮಾಡಬೇಕೆಂದು ರೂಪಿಸಿದ ಕಾಯಿದೆಯನ್ನು ರಾಜ್ಯ ಸರ್ಕಾರ ಬದ್ಧತೆಯಿಂದ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿದರು.
ಸಂಘಟನೆಯ ಪ್ರಮುಖರಾದ ಅಜಯ, ಅಶೋಕ ಕುಸಬಿ, ರವಿಕುಮಾರ ಬೆಳಮಕರ, ಇಬ್ರಾಹಿಂ ಮುಲ್ಲಾ, ಮಂಜುನಾಥ ಶ್ರೀಗಿರಿ, ಮೆಹರುನಿಸಾ ಢಾಲಾಯತ, ಮೈಮುನ ಬೈರಕದಾರ, ಪ್ರೇಮಾ ಮಣವಡ್ಡರ, ಸುಶೀಲಮ್ಮ ಗೊಂದಾರ, ಮೆಹಬೂಬಸಾಬ ಬಳ್ಳಾರಿ, ಸಾಕ್ರುಬಾಯಿ ಗೋಸಾವಿ, ಖಾಜೇಸಾಬ ಇಸ್ಮಾಯಿಲನವರ, ಮಕ್ತುಮಸಾಬ ಮುಲ್ಲಾನವರ, ಮಲೇಶಪ್ಪ ಕಲಾಲ, ಮೆಹರುನಿಸಾ ಡಂಬಳ, ಚಂದ್ರಪ್ಪ ಲಕ್ಕುಂಡಿ, ದುರ್ಗಪ್ಪ ಮಣವಡ್ಡರ, ಶರಣಪ್ಪ ಬಿಂಕದಕಟ್ಟಿ, ಈರಮ್ಮ ಬೇವಿನಮರದ, ನಾಗರಾಜ ಮಣವಡ್ಡರ, ಶಿವಾನಂದ ಶಿಗ್ಲಿ, ರಾಜೇಸಾಬ ಸೈಯದ, ಮಂಜುನಾಥ ಒಂಟಿಯಲಿ ಮುಂತಾದವರು ಉಪಸ್ಥಿತರಿದ್ದರು.