ಬೆಂಗಳೂರು:-ದಿನಗಳು ಉರುಳಿದಂತೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ಗೆ ಸಂಕಷ್ಟಗಳು ಹೆಚ್ಚಾಗುತ್ತಿವೆ. ಕೊಲೆ ಕೇಸ್ ವಿಚಾರವಾಗಿ ಪೊಲೀಸರು ತೀವ್ರಗತಿಯಲ್ಲಿ ತನಿಖೆ ನಡೆಸುತ್ತಿದ್ದು, ಹೆಚ್ಚು ಹೆಚ್ಚು ಸಾಕ್ಷ್ಯಗಳನ್ನ ಸಂಗ್ರಹ ಮಾಡುತ್ತಿದ್ದಾರೆ. ಇದೀಗ ದರ್ಶನ್ ವಿರುದ್ಧ ಪೊಲೀಸರಿಗೆ ಮತ್ತೊಂದು ಬಲವಾದ ಸಾಕ್ಷ್ಯ ಲಭಿಸಿದೆ
ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಜೈಲಿನಿಂದಲೇ ಕೆಲ ಸಾಕ್ಷಿಗಳಿಗೆ ಬೆದರಿಕೆ ಹಾಕುವ ಕೆಲಸವೂ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿ ದರ್ಶನ್ ಗ್ಯಾಂಗ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಜೈಲಿನಲ್ಲಿದ್ದುಕೊಂಡೇ ದರ್ಶನ್ ಅಂಡ್ ಗ್ಯಾಂಗ್ ಬೆದರಿಕೆ ಹಾಕಿರೋದು ಬೆಳಕಿಗೆ ಬಂದಿದೆ. ಕೊಲೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿರೋ ವ್ಯಕ್ತಿಗೆ ಸಾಕ್ಷಿ ನುಡಿಯದಂತೆ ಡಿ ಗ್ಯಾಂಗ್ ಬೆದರಿಕೆ ಹಾಕಿದೆ ಎನ್ನಲಾಗಿದೆ. ಸದ್ಯ ಬೆದರಿಕೆ ಸಂಬಂಧ ಸಾಕ್ಷಿದಾರ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮತ್ತೊಂದೆಡೆ ರೇಣುಕಾಸ್ವಾಮಿ ಕೊಲೆಯಲ್ಲಿ ಪ್ರಮುಖವಾಗಿ ಬಳಸಿರೋ ಸಾಧನ ಮೆಗ್ಗರ್ ಬಗ್ಗೆ ಮಹತ್ವದ ಮಾಹಿತಿ ತಿಳಿಸದುಬಂದಿದೆ. ಕರೆಂಟ್ ಶಾಕ್ ನೀಡಲೆಂದೇ ಮೆಗ್ಗರ್ ಅನ್ನು ಖರೀದಿ ಮಾಡಿರೋದು ತನಿಖೆ ವೇಳೆ ಬೆಳಕಿಗೆ ಬಂದಿದೆ.