HomeCrime Newsಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಭೀಕರ ಅಪಘಾತ: ಓರ್ವ ಸಾವು.! ಇಬ್ಬರಿಗೆ ಗಾಯ

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಭೀಕರ ಅಪಘಾತ: ಓರ್ವ ಸಾವು.! ಇಬ್ಬರಿಗೆ ಗಾಯ

For Dai;y Updates Join Our whatsapp Group

ಬೆಂಗಳೂರು: ಬೆಂಗಳೂರಿನಲ್ಲಿ ದಿನೇ ದಿನೇ ಅಪಘಾತಗಳು ಹೆಚ್ಚುತ್ತಿವೆ. ಸಾವು ನೋವುಗಳು ಯಾವ ರೀತಿ ಬರುತ್ತದೆ ಎಂದು ಯಾರಿಗೂ ತಿಳಿದಿರುವುದಿಲ್ಲ.. ಅದೇ ರೀತಿ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಜುನಾಥ್ (52) ಮೃತ ದುರ್ದೈವಿಯಾಘಿದ್ದಾರೆ. ಫ್ಲೈಓವರ್ ಮೇಲೆ ಕಾರೊಂದು ಬ್ರೇಕ್ ಡೌನ್ ಆಗಿ ನಿಂತಿತ್ತು.

ಅದನ್ನು ಸರಿಪಡಿಸಲು ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಹೋಗಿದ್ದರು. ಸಿಬ್ಬಂದಿ ಸತೀಶ್ ಹಾಗೂ ರಾಜಣ್ಣ ಎಂಬುವವರು ಟೋಯಿಂಗ್‌ಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಈ ವೇಳೆ ಫ್ಲೈಓವರ್ ಮೇಲೆ ವೇಗವಾಗಿ ಬಂದ ಬುಲೆರೋ ಪಿಕಪ್‌ವೊಂದು ಕಾರು ದುರಸ್ತಿ ಮಾಡುತ್ತಿದ್ದವರಿಗೆ ಡಿಕ್ಕಿ ಹೊಡೆದಿದೆ. ಬುಲೆರೋ ಬರುತ್ತಿದ್ದಂತೆ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಸತೀಶ್ ಪಕ್ಕಕ್ಕೆ ಹಾರಿ ತಪ್ಪಿಸಿಕೊಂಡಿದ್ದಾರೆ.

ಇದರಿಂದ ರಾಜಣ್ಣ ಎಂಬುವರಿಗೆ ಬುಲೆರೋ ಡಿಕ್ಕಿ ಹೊಡೆದಿದೆ. ಇದೇ ವೇಳೆ ಬ್ರೇಕ್ ಡೌನ್ ಆಗಿದ್ದ ಕಾರಿನ ಫೋಟೋ ತೆಗೆಯುತ್ತಿದ್ದ ಮಂಜುನಾಥ್ ಅವರಿಗೂ ಬುಲೆರೋ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮಂಜುನಾಥ್ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಬುಲೆರೋ ಪಿಕಪ್ ಪಲ್ಟಿಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img