ಭೀಕರ ಅಪಘಾತ: ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಕ್ಲೀನರ್ ಸಾವು!

0
Spread the love

ಬೆಂಗಳೂರು:- ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಕ್ಲೀನರ್‌ರೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಬೆಂಗಳೂರಿನ ಚಿಕ್ಕಬಾಣವಾರ ಸಮೀಪದ ಬ್ಯಾಲಕೆರೆ ರಸ್ತೆಯಲ್ಲಿ ಜರುಗಿದೆ.

Advertisement

42 ವರ್ಷದ ಲಾರಿ ಕ್ಲೀನರ್‌ ರಾಮನಂದ್ ಸಿಂಗ್ ಮೃತ ದುರ್ದೈವಿ ಎನ್ನಲಾಗಿದೆ.

ಲಾರಿ ರಿವರ್ಸ್ ತೆಗೆಯಬೇಕಾದರೆ ಈ ದುರ್ಘಟನೆ ನಡೆದಿದೆ. ಸದ್ಯ ಲಾರಿ ಹಾಗೂ ಚಾಲಕನನ್ನು ಸಂಚಾರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಚಿಕ್ಕಬಾಣವಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ ಎನ್ನಲಾಗಿದೆ.


Spread the love

LEAVE A REPLY

Please enter your comment!
Please enter your name here