ಗದಗ ಸಮೀಪದ ಅಡವಿಸೋಮಾಪೂರ ಸಣ್ಣ ತಾಂಡೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಾವಣ ಮಾಸದ ಮೊದಲ ಸೋಮವಾರದ ನಿಮಿತ್ತ ಮಕ್ಕಳಿಗೆ ಅಮೃತ ಸಿಹಿ ಭೋಜನ ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ಮಲ್ಲೇಶ ಡಿ.ಎಚ್, ಶಿಕ್ಷಕರಾದ ಎಸ್.ಜಿ. ಅಮ್ಮಿನಭಾವಿ, ಎಸ್.ಟಿ. ಹಳಕಟ್ಟಿ, ಪಿ.ಬಿ. ಕಿಲಬನವರ, ಎಸ್ಡಿಎಂಸಿ ಅಧ್ಯಕ್ಷ ಮಾರುತಿ ಪವಾರ, ಗ್ರಾ.ಪಂ ಸದಸ್ಯ ವೆಂಕಟೇಶ್ ಲಮಾಣಿ, ಅಡುಗೆ ಸಿಬ್ಬಂದಿಗಳಾದ ಸಾವಿತ್ರಿ ರಾಠೋಡ, ಗಂಗವ್ವ ಲಮಾಣಿ, ದೇವಕ್ಕ ಲಮಾಣಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.