ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಬಿಜೆಪಿ ವಾಮಮಾರ್ಗದಲ್ಲಿ ಅಧಿಕಾರ ಹಿಡಿಯಲು ಯತ್ನಿಸುತ್ತಿದೆ. ಪ್ರಜಾಪ್ರಭುತ್ವದಲ್ಲಿ ಅವರಿಗೆ ನಂಬಿಕೆ ಇಲ್ಲ, ತಮ್ಮಲ್ಲಿಯೇ ಒಗ್ಗಟ್ಟಿಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಈಶ್ವರ ಹೇಳಿದರು.
Advertisement
ಅವರು ಸೋಮವಾರ ಶಿರಹಟ್ಟಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಡಾದಲ್ಲಿ ಸಿಎಂ ಪಾತ್ರ ಏನೂ ಇಲ್ಲ. ಆದಾಗ್ಯೂ ರಾಜ್ಯಪಾಲರು ನೋಟಿಸ್ ನೀಡಿದ್ದು ಸರಿಯಲ್ಲ. ಇದನ್ನು ಹಿಂಪಡೆಯುವಂತೆ ಮಂತ್ರಿ ಪರಿಷತ್ ವತಿಯಿಂದ ಈಗಾಗಲೇ ಮನವಿ ಸಲ್ಲಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಇಡೀ ಸಂಪುಟ ಸಚಿವರು ಸೇರಿದಂತೆ ಎಐಸಿಸಿ ಕೂಡ ಬೆಂಬಲಕ್ಕೆ ನಿಂತಿದೆ. ರಾಜ್ಯಪಾಲರು ಈ ಕೂಡಲೇ ತಾವು ನೀಡಿರುವ ನೋಟಿಸನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.