ಉಡುಪಿ: ದೂರದರ್ಶನದ ಉಡುಪಿ ಜಿಲ್ಲಾ ವರದಿಗಾರ ಜಯಕರ ಸುವರ್ಣ (67) ಹೃದಯಾಘಾತದಿಂದ ಸೋಮವಾರ ರಾತ್ರಿ ನಿಧನ ಹೊಂದಿದ್ದಾರೆ. ಜಯಕರ ಸುವರ್ಣ ದೂರದರ್ಶನ ಉಡುಪಿ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅತ್ಯುತ್ತಮ ಛಾಯಾಗ್ರಾಹಕರಾಗಿದ್ದ ಅವರು,
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇವರು ಪತ್ನಿ ಮೂವರು ಮಕ್ಕಳು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ತೀವ್ರ ಸಂತಾಪ ವ್ಯಕ್ತಪಡಿಸಿದೆ.



