ಚಿತ್ರದುರ್ಗ: ಬೆಂಗಳೂರಲ್ಲಿ ಪೊಲೀಸ್ ಠಾಣೆಗೆ ಪೋಸ್ಟಿಂಗ್ ಪಡೆಯಲು ಕೋಟಿಗಟ್ಟಲೆ ರೂಪಾಯಿ ಹಣ ಕೊಡಬೇಕು ಎಂದು ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಆರೋಪಿಸಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಬೆಂಗಳೂರಲ್ಲಿ ಪೊಲೀಸ್ ಠಾಣೆಗೆ ಪೋಸ್ಟಿಂಗ್ ಪಡೆಯಲು ಕೋಟಿಗಟ್ಟಲೆ ರೂಪಾಯಿ ಹಣ ಕೊಡಬೇಕು.
ಜಿಲ್ಲೆಗಳಲ್ಲಿ ಲಕ್ಷಾಂತರ ರೂಪಾಯಿ ಹಣ ಕೊಡಬೇಕಿದೆ. ಜನಪ್ರತಿನಿಧಿಗಳು, ಗೃಹ ಸಚಿವರು, ಮುಖ್ಯಮಂತ್ರಿಗೆ ಹಣ ಕೊಡಬೇಕು. ಪ್ರಬಲ ಮುಖ್ಯಮಂತ್ರಿ ಇದ್ದರೆ ಈ ರೀತಿ ಆಗುವುದಿಲ್ಲ. ದುರ್ಬಲ ಮುಖ್ಯಮಂತ್ರಿ ಇದ್ದಾಗ ಹೀಗೆಲ್ಲ ಆಗುತ್ತದೆ. ಶಾಸಕರಿಗೆಲ್ಲ ತೋಳಗಳಂತೆ ಹಣ ಕೀಳಲು ಬಿಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.
ಇನ್ನೂ ಪೊಲೀಸರನ್ನೇ ಈ ಸರ್ಕಾರ ಭಕ್ಷಕರನ್ನಾಗಿ ಮಾಡಿದೆ. ಲಕ್ಷಾಂತರ ರೂ. ಕೊಡುವವರೆಗೆ ಪೋಸ್ಟಿಂಗ್ ಕೊಡುವುದಿಲ್ಲ. ಸಮವಸ್ತ್ರಧಾರಿಗಳು ಭಕ್ಷಕರು ಮಾತ್ರವಲ್ಲ ಭಿಕಾರಿಗಳಾಗಿದ್ದಾರೆ. ಇದು ನೇರವಾಗಿ ಜನರ ಮೇಲೆ ಪರಿಣಾಮ ಬೀರುತ್ತಿದೆ ಎಂದರು.



