ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚನೆ: ಬಿಜೆಪಿ ಮುಖಂಡ ಅರೆಸ್ಟ್.!

0
Spread the love

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಬಿಜೆಪಿ ಮುಖಂಡ ಶರತ್ ಕಲ್ಯಾಣಿ ಎಂಬ ವ್ಯಕ್ತಿ ಮೇಲೆ ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚಿಸಿದ ಆರೋಪ ಕೇಳಿ ಬಂದಿದೆ.

Advertisement

ಈ ಆರೋಪದ ಮೇಲೆ ಆರೋಪಿಯನ್ನು ಅರೆಸ್ಟ್‌ ಮಾಡಿದ್ದಾರೆ. ಮದುವೆ ಆಗುವುದಾಗಿ ನಂಬಿಸಿ ಮೋಸ ಜೊತೆಗೆ ಸಂತ್ರಸ್ತೆಯಿಂದ 4 ಲಕ್ಷ ರೂ. ಹಣ ಪಡೆದು ಹಿಂದಿರುಗಿಸದೆ ವಂಚಿಸಿದ್ದಾನೆ.

ಶಿವಮೊಗ್ಗ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಮುಖ್ ಆಗಿರುವ ಶರತ್ ವಿರುದ್ಧ ಜುಲೈ 26ರಂದು ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಎಫ್ಐಆರ್ ದಾಖಲಾಗುತ್ತಿದ್ದಂತೆಯೇ ಶರತ್ ನಾಪತ್ತೆಯಾಗಿದ್ದ. ಇದೀಗ ಶರತ್ ವಿಜಯಪುರದ ಬಳಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಏಳೆಂಟು ತಿಂಗಳಿಂದ ಮಹಿಳೆ ಜೊತೆ ನಿರಂತರ ಸಂಪರ್ಕದಲ್ಲಿದ್ದ ಶರತ್, ಸಂತ್ರಸ್ತ ಮಹಿಳೆಯು ಮದುವೆಯಾಗು ಎಂದು ಒತ್ತಾಯಿಸಿದ್ದಾಳೆ. ಈ ವೇಳೆ ಶರತ್, ‘ನನಗೆ ಹಣಕಾಸಿನ ಸಮಸ್ಯೆ ಇದೆ. ಅದು ಬಗೆಹರಿದ ನಂತರ ಮದುವೆಯಾಗುತ್ತೇನೆ’ ಎಂದು ಭರವಸೆ ನೀಡಿದ್ದ. ಅಲ್ಲದೆ, ಈಗ ನನಗೆ ಸಹಾಯ ಮಾಡು ಎಂದು ಕೇಳಿದ್ದ. ಈ ವೇಳೆ ಮಹಿಳೆಯು ಹಲವು ಬಾರಿ ಹಣ ನೀಡಿದ್ದು, ಒಟ್ಟು ನಾಲ್ಕು ಲಕ್ಷ ಹಣವನ್ನು ಶರತ್‌ಗೆ ನೀಡಿದ್ದರು.

ನಂತರ ಮಹಿಳೆ ಮದುವೆಗೆ ಒತ್ತಾಯಿಸಿದಾಗ ಶರತ್ ಆಕೆಯ ಮನೆ ಕಡೆ ಹೋಗುವುದನ್ನು ನಿಲ್ಲಿಸಿದ್ದಲ್ಲದೆ, ಫೋನ್ ಸಂಪರ್ಕವನ್ನೂ ಕಡಿದುಕೊಂಡಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಶರತ್ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದರು. ಒಂದು ವಾರದಿಂದ ತಲೆಮರಿಸಿಕೊಂಡಿದ್ದ ಆರೋಪಿ ವಿಜಾಪುರದಲ್ಲಿ ಪೊಲೀಸ್ ಬಲೆಗೆ ಬಿದ್ದಿದ್ದು, ವಿಚಾರಣೆ ಒಳಪಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here