HomeBengaluru Newsರಾಜಧಾನಿ ಬೆಂಗಳೂರಲ್ಲಿ ಇನ್ಮುಂದೆ ಮಧ್ಯರಾತ್ರಿ 1 ಗಂಟೆವರೆಗೆ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್ ಓಪನ್!

ರಾಜಧಾನಿ ಬೆಂಗಳೂರಲ್ಲಿ ಇನ್ಮುಂದೆ ಮಧ್ಯರಾತ್ರಿ 1 ಗಂಟೆವರೆಗೆ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್ ಓಪನ್!

For Dai;y Updates Join Our whatsapp Group

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇನ್ಮುಂದೆ ಮಧ್ಯರಾತ್ರಿ 1 ಗಂಟೆವರೆಗೆ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್ ತೆರೆದಿರಲಿದೆ.

ಈ ಬಗ್ಗೆ ಬಿಬಿಎಂಪಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಲಕ್ಷ್ಮೀ ಸಾಗರ್‌ ಎನ್‌.ಕೆ. ಆದೇಶ ಹೊರಡಿಸಿದ್ದಾರೆ.

ಬೆಳಗ್ಗೆ 9ರಿಂದ ರಾತ್ರಿ 1 ಗಂಟೆವರೆಗೆ ವ್ಯಾಪಾರ-ವಹಿವಾಟು ನಡೆಸಲು ಅನುಮತಿ ನೀಡಿದೆ. ಈ ಬಗ್ಗೆ ಬಿಬಿಎಂಪಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಲಕ್ಷ್ಮೀ ಸಾಗರ್‌ ಎನ್‌.ಕೆ. ಆದೇಶ ಹೊರಡಿಸಿದ್ದಾರೆ. ಈ ಆದೇಶದ ಪ್ರಕಾರ ಸಿಎಲ್‌ 4, ಸಿಎಲ್‌ 6, ಸಿಎಲ್‌ 7, ಸಿಎಲ್‌ 7D ಲೈಸೆನ್ಸ್ ಪಡೆದ ಹೋಟೆಲ್‌, ಕ್ಲಬ್‌, ರೆಸ್ಟೋರೆಂಟ್‌ಗೆ ಬೆಳಗ್ಗೆ 9 ರಿಂದ ಮಧ್ಯರಾತ್ರಿ 1 ಗಂಟೆವರೆಗೆ ಹಾಗೂ ಸಿಎಲ್‌ 9 ಲೈಸೆನ್ಸ್ ಪಡೆದ ಬಾರ್‌ಗಳಿಗೆ ಬೆಳಗ್ಗೆ 10ರಿಂದ ಮಧ್ಯರಾತ್ರಿ 1 ಗಂಟೆವರೆಗೆ ವ್ಯಾಪಾರ ವಹಿವಾಟಿನ ಸಮಯ ನಿಗದಿಪಡಿಸಲಾಗಿದೆ.

2024-25ನೇ ಸಾಲಿನ ಆಯವ್ಯಯ ಭಾಷಣ ಕಂಡಿಕೆ 269 ರಲ್ಲಿ ಘೋಷಿಸಲಾದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಣಿಜ್ಯ ವ್ಯಾಪಾರದ ದೃಷ್ಟಿಯಿಂದ ರಾತ್ರಿಯ ವೇಳೆ ವ್ಯಾಪಾರ-ವಹಿವಾಟಿನ ಮೇಲಿನ ನಿರ್ಬಂಧವನ್ನು ಮಧ್ಯಾರಾತ್ರಿ 1 ಗಂಟೆಯವರೆಗೆ ವಿಸ್ತರಿಸಲಾಗಿದೆ. ಜುಲೈ 06 ರಂದು ನಡೆದ ಸಭೆಯಲ್ಲಿ ಆರ್ಥಿಕ ಇಲಾಖೆ ಸಹಮತಿ ನೀಡಿದ ಹಿನ್ನೆಲೆ ವ್ಯಾಪಾರ-ವಹಿವಾಟು ವಿಸ್ತರಣೆಗೆ ಅನುಮತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img