ಪ್ಲಾಸ್ಟಿಕ್ ರಾಷ್ಟ್ರಧ್ವಜ ನಿಷೇಧಿಸಲು ರಾಜ್ಯಪಾಲರಿಗೆ ಮನವಿ

0
Ban plastic national flag
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ರಾಷ್ಟ್ರೀಯ ಧ್ವಜವನ್ನು ಜನೇವರಿ 26 ಮತ್ತು ಆಗಸ್ಟ್ 15ರಂದು ಹೆಮ್ಮೆಯಿಂದ ಪ್ರದರ್ಶಿಸುತ್ತೇವೆ. ಆದರೆ ಪ್ಲಾಸ್ಟಿಕ್ ಧ್ವಜಗಳನ್ನು ಉಪಯೋಗಿಸಿ ಅವುಗಳನ್ನು ಎಲ್ಲೆಂದರಲ್ಲಿ ಎಸೆದು ಅವಮಾನ ಮಾಡುತ್ತಿರುವುದು ಖಂಡನೀಯ. ಈ ನಿಟ್ಟಿನಲ್ಲಿ ಪ್ಲಾಸ್ಟಿಕ್ ಧ್ವಜ ನಿಷೇಧಿಸಿ ರಾಷ್ಟ್ರಧ್ವಜಕ್ಕೆ ಆಗುವ ಅವಮಾನ ತಪ್ಪಿಸಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯವರು ಮಂಗಳವಾರ ತಹಸೀಲ್ದಾರ ವಾಸುದೇವ ಸ್ವಾಮಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಅರ್ಪಿಸಿದರು.

Advertisement

ಪ್ಲಾಸ್ಟಿಕ್ ನಿಷೇಧವಿದ್ದರೂ, ಪ್ಲಾಸ್ಟಿಕ್ ರಾಷ್ಟ್ರಧ್ವಜ ಬಳಕೆ ಮಾಡುವದನ್ನು ನಿಲ್ಲಿಸುವಂತೆ ಕೋರ್ಟ್ ಆದೇಶವಿದ್ದರೂ ಸಹ ಸಂಬಂಧಿಸಿದವರ ಮೇಲೆ ಯಾವುದೇ ಕ್ರಮಗಳು ಆಗುತ್ತಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು.

ಅಲ್ಲದೇ ಬೆಂಗಳೂರಿಗೆ ಅಕ್ರಮವಾಗಿ ಕಳಪೆ ಗುಣಮಟ್ಟದ ಮಾಂಸ ಸರಬರಾಜು ಮತ್ತು ಮಾರಾಟ ಮಾಡುವವರ ಮೇಲೆಯೂ ಕ್ರಮ ಜರುಗಿಸಬೇಕು. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡುವ ರಾಜ್ಯ ಸರಕಾರದ ಆದೇಶವನ್ನು ರದ್ದುಗೊಳಿಸಿ ರಾಜ್ಯಪಾಲರು ಆದೇಶ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.

ಈ ವೇಳೆ ಸಮಿತಿಯ ಅಮಿತ್ ಗುಡಗೇರಿ, ಬಸವರಾಜ ಆಲೂರ, ಅರುಣ ಮೆಕ್ಕಿ, ಕುಮಾರ ಕಣವಿ, ಆದೇಶ ಸವಣೂರ, ಮಲ್ಲಿಕಾರ್ಜುನ ಹಾಳದೋಟದ, ಪ್ರವೀಣ ಕುಂಬಾರ, ಬಸವರಾಜ ಕರೆಯತ್ತಿನ ಮುಂತಾದವರಿದ್ದರು.


Spread the love

LEAVE A REPLY

Please enter your comment!
Please enter your name here