ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತದ ಕುಸ್ತಿಪಟು ವಿನೇಶ್ ಪೋಗಟ್ ಅವರು ಇತಿಹಾಸ ಬರೆದಿದ್ದರು. ಸೆಮಿಫೈನಲ್ನಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಫೈನಲ್ ಪ್ರವೇಶಿಸಿದ್ದು, ಬೆಳ್ಳಿ ಅಥವಾ ಚಿನ್ನದ ಪದಕ ಬೇಟೆಯಾಡುವ ಭರವಸೆ ನೀಡಿದ್ದರು ಆದ್ರೆ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಇದೀಗ ಸ್ಪರ್ಧೆಯಿಂದ ಅನರ್ಹಗೊಂಡಿದ್ದಾರೆ.
Advertisement
ವಾಸ್ತವವಾಗಿ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ವಿನೇಶ್ ಅವರ ತೂಕ ಪರೀಕ್ಷೆಯಲ್ಲಿ ವಿನೇಶ್ ಫೋಗಟ್ ಅವರ ತೂಕವು ನಿಗದಿತ ಮಿತಿಗಿಂತ 100 ಗ್ರಾಂ ಹೆಚ್ಚಿರುವುದು ಕಂಡುಬಂದಿದೆ. ನಿಯಮಗಳ ಪ್ರಕಾರ, ಯಾವುದೇ ಕುಸ್ತಿಪಟುವಿಗೆ ಯಾವುದೇ ವಿಭಾಗದಲ್ಲಿ 100 ಗ್ರಾಂ ಹೆಚ್ಚುವರಿ ತೂಕದ ಭತ್ಯೆ ನೀಡಲಾಗುತ್ತದೆ. ಆದರೆ ವಿನೇಶ್ ಅವರ ತೂಕ ಇದಕ್ಕಿಂತ ಹೆಚ್ಚಿದೆ ಹೀಗಾಗಿ ಅವರು ಫೈನಲ್ ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ ಎಂದು ವರದಿಯಾಗಿದೆ.