HomeBengaluru NewsLalbagh Flower Show: ಲಾಲ್​ಬಾಗ್​ನಲ್ಲಿ ಫ್ಲವರ್ ಶೋಗೆ ಸಿಎಂ ಸಿದ್ದರಾಮಯ್ಯ ಚಾಲನೆ!

Lalbagh Flower Show: ಲಾಲ್​ಬಾಗ್​ನಲ್ಲಿ ಫ್ಲವರ್ ಶೋಗೆ ಸಿಎಂ ಸಿದ್ದರಾಮಯ್ಯ ಚಾಲನೆ!

For Dai;y Updates Join Our whatsapp Group

Spread the love

ಬೆಂಗಳೂರು:– ತೋಟಗಾರಿಕೆ ಇಲಾಖೆ ವತಿಯಿಂದ ಲಾಲ್ ಬಾಗ್ ನಲ್ಲಿ ಆಯೋಜನೆ ಮಾಡಲಾಗಿದ್ದ ಫ್ಲವರ್ ಶೋಗೆ ಇಂದು ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಹೀಗಾಗಿ ಇಂದಿನಿಂದ ಸಸ್ಯ ಕಾಶಿಯಲ್ಲಿ ಹೂವಿನ ಕಲರವ ರಂಗೇರಲಿದೆ.

ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಮೊಮ್ಮಗ ಯಶವಂತ್ ಅಂಬೇಡ್ಕರ್ ಅವರು ಕೂಡ ಭಾಗಿಯಾಗಿದ್ದಾರೆ.

ಈ ವರ್ಷ ಸಂವಿಧಾನ ಶಿಲ್ಪಿ ಡಾ ಬಿ.ಆರ್. ಅಂಬೇಡ್ಕರ್ ಅವರ ಕಾನ್ಸೆಪ್ಟ್ ನಲ್ಲಿ ಫ್ಲವರ್ ಶೋ ಮೂಡಿಬಂದಿದ್ದು, ಆಗಸ್ಟ್ 19ರವರೆಗೂ ನಲ್ಲಿ ಫ್ಲವರ್ ಶೋ ಇರಲಿದೆ. ಸಂಸತ್, ಭೀಮ ಸ್ಮರಾಕ, ಅಂಬೇಡ್ಕರ್ ಅವರು ಹುಟ್ಟಿದ ಜಾಗ, ಅವರು ಹುಟ್ಟಿ ಬೆಳೆದು ಬಂದಂತಹ ಹಾದಿ ಹೇಗಿತ್ತು ಎನ್ನುವುದು ಪ್ಲವರ್ ಶೋ ನ ಪ್ರಮುಖ ಆಕರ್ಷಣೆಗಳಾಗಿವೆ.‌

ಪ್ಲವರ್ ಶೋ‌ನಲ್ಲಿ 200 ಕ್ಕು ಹೆಚ್ಚು ಬಗೆಯ ಹೂಗಳು ಒಂದೇ ಸ್ಥಳದಲ್ಲಿ ಜನರನ್ನ ಮೋಡಿ ಮಾಡುತ್ತಿದ್ದು, ಒಟ್ಟು 35 ಲಕ್ಷ ಹೂಗಳನ್ನ ಪ್ಲವರ್ ಶೋಗೆ ಬಳಕೆ ಮಾಡಿಕೊಳ್ಳಲಾಗಿದೆ. ಇನ್ನು ಫ್ಲವರ್ ಶೋಗೆಂದೆ ಆಂಧ್ರ, ಊಟಿ, ತಮಿಳುನಾಡು ಸೇರಿದಂತೆ ಬೇರೆ ಬೇರೆ ಭಾಗದಿಂದ ಹೂಗಳು ಬಂದಿದ್ದು, ಲಾಲ್ ಬಾಗ್​ನ ಗಾಜಿನ ಮನೆಯಲ್ಲಿ ಮೋಡಿ ಮಾಡಿವೆ.

ಫ್ಲವರ್ ಶೋ ನಲ್ಲಿ ಆಂಥೋರಿಯಂ, ಲಿಲ್ಲಿ, ಆರ್ಕಿಡ್‌, ಜರ್‌ಬೆರಾ, ಸೇವಂತಿಗೆ, ನಂದಿ ಗಿರಿಧಾಮದ ಇಂಪೇಷನ್ಸ್‌ ಹೂಗಳು, ಅಗಪಾಂಥಸ್‌, ಸುಗಂಧ ರಾಜ ಸೇರಿದಂತೆ 200 ಪ್ರಭೇದದ ಸುಮಾರು 30-32 ಲಕ್ಷ ಹೂಗಳನ್ನು ಪ್ರದರ್ಶನದಲ್ಲಿ ಬಳಕೆ ಮಾಡಕೊಳ್ಳಲಾಗಿದೆ. ಸುಮಾರು 8 ಲಕ್ಷ ಹೂಗಳು ಹೊರ ರಾಜ್ಯಗಳಿಂದ ಬಂದಿವೆ ಎಂದು ತಿಳಿದು ಬಂದಿದೆ.

ಇನ್ನೂ ತೋಟಗಾರಿಕೆ ಇಲಾಖೆ ವತಿಯಿಂದ ಈ ಬಾರಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ವಿಷಯಾಧಾರಿತವಾಗಿ ಫ್ಲವರ್​ಶೋ ಪ್ರದರ್ಶನ ಆಯೋಜನೆ ಮಾಡಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!