ಯಾರೂ ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಆಗಲ್ಲ: ಬಸವರಾಜ ರಾಯರೆಡ್ಡಿ

0
Spread the love

ಮೈಸೂರು: ಯಾರೂ ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಆಗಲ್ಲ. ಹೈಕಮಾಂಡ್ ಕೂಡ ಅಂತಹ ಮನಸ್ಸನ್ನು ಮಾಡುವುದಿಲ್ಲ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರೂ ಆಗಿರುವ ಶಾಸಕ ಬಸವರಾಜ ರಾಯರೆಡ್ಡಿ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಯಾರೂ ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಆಗಲ್ಲ. ಹೈಕಮಾಂಡ್ ಕೂಡ ಅಂತಹ ಮನಸ್ಸನ್ನು ಮಾಡುವುದಿಲ್ಲ ಎಂದರು.

Advertisement

ರಾಜೀನಾಮೆ ಕೊಡ್ತೇನೆಂದು ಸಿದ್ದರಾಮಯ್ಯ ಬಾಂಡ್​​ಪೇಪರ್​ನಲ್ಲಿ ಬರೆದುಕೊಟಿದ್ದಾರಾ? ಅವರೇ ಇನ್ನೂ ಮೂರೂವರೆ ವರ್ಷ ಸಿಎಂ ಆಗಿರಬೇಕು. ಹೈಕಮಾಂಡ್ ಸಂಪೂರ್ಣವಾಗಿ ಸಿದ್ದರಾಮಯ್ಯ ಬೆನ್ನಿಗೆ ನಿಂತಿದೆ. ಈ ಬಗ್ಗೆ ನನಗೂ ಮಾಹಿತಿ ಬಂದಿದೆ. ಸಿಎಂ ಸ್ಥಾನಕ್ಕಾಗಿ ಯಾರು ಸಹ ನಮ್ಮಲ್ಲಿ ಪ್ರಯತ್ನ ಮಾಡುತ್ತಿಲ್ಲ ಎಂದು ಅವರು ಹೇಳಿದರು.

ವಾರದ ಹಿಂದಷ್ಟೇ ಅವರು ಇದೇ ರೀತಿಯ ಹೇಳಿಕೆ ನೀಡಿದ್ದರು. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಯಾರಿಂದಲೂ ಸಾಧ್ಯವಿಲ್ಲ. ಅವರು ಇನ್ನೂ 3 ವರ್ಷ 10 ತಿಂಗಳು ಜನಪರ ಆಡಳಿತ ನೀಡಲಿ ಎಂಬುದು ನಮ್ಮ ಆಶಯ ಎಂದು ಕೊಪ್ಪಳದಲ್ಲಿ ರಾಯರೆಡ್ಡಿ ಹೇಳಿದ್ದರು. ಇದೀಗ ಜನಾಂದೋಲನ ಸಮಾವೇಶದಲ್ಲೇ ಆ ಬಗ್ಗೆ ಹೇಳಿಕೆ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here