Health Benefits of Guava: ಸೀಬೆ ಹಣ್ಣು ಸೇವನೆಯಿಂದ ಇಷ್ಟೆಲ್ಲಾ ಪ್ರಯೋಜನಗಳಿವೆ!

0
Spread the love

ಪೇರಳೆ ಅಥವಾ ಸೀಬೆ ಹಣ್ಣು ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನ ಪಡೆಯಬಹುದು. ಪೇರಳೆಯಲ್ಲಿರುವ ವಿಟಮಿನ್ ‘C’ ಯಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸೀಬೆ ಹಣ್ಣಿನಲ್ಲಿ ವಿಟಮಿನ್ ‘A’ ಹೆಚ್ಚಿರುವುದರಿಂದ ಕಣ್ಣಿನ ಆರೋಗ್ಯವನ್ನು ಕಾಪಾಡುತ್ತದೆ.

Advertisement

ಸೀಬೆಹಣ್ಣು ಮಳೆಗಾಲದಲ್ಲಿ ಬರುವ ಶೀತ, ನೆಗಡಿ & ಕೆಮ್ಮು ದೂರಮಾಡುತ್ತದೆ. ವಿಟಮಿನ್ ‘ಸಿ’ಗೆ ಕ್ಯಾನ್ಸರ್ ಕಾರಕಗಳನ್ನು ದೂರ ಮಾಡುವ ಶಕ್ತಿಯೂ ಇದೆ. ಸೀಬೆ ಹಣ್ಣಿನ ಬೀಜದ ಸತ್ವವು ಥೈರಾಯಿಡ್ ಗ್ರಂಥಿಗೆ ಆರೋಗ್ಯಕಾರಿಯಾಗಿದೆ.

ಕಡಿಮೆ ಕ್ಯಾಲೋರಿಯ ಈ ಹಣ್ಣು , ದೇಹಕ್ಕೆ ವಿಟಮಿನ್‌ಗಳ ಮಹಾಪೂರವನ್ನೇ ಪೂರೈಸುವುದರೊಂದಿಗೆ ಕೊಬ್ಬಿನಾಂಶದ ಪ್ರಮಾಣವನ್ನು ಕುಂಠಿತಗೊಳಿಸುತ್ತದೆ ಎನ್ನುತ್ತಾರೆ ಎಕ್ಸ್‌ಪರ್ಟ್ಸ್.

ಸೀಬೆ ಹಣ್ಣನ್ನು ತಿನ್ನುವುದರಿಂದ ದೇಹದಲ್ಲಿ ಸೋಡಿಯಂ ಮತ್ತು ಪೊಟ್ಯಾಸಿಯಮ್ ಸಮತೋಲನವನ್ನು ಸುಧಾರಿಸುತ್ತದೆ. ಇದರಿಂದ ರಕ್ತದೊತ್ತಡವನ್ನು ನಿಯಂತ್ರಿಣಕ್ಕೆ ಬರುತ್ತದೆ. ಪೇರಲೆಯನ್ನು ತಿನ್ನುವುದು ಟ್ರೈಗ್ಲಿಸರೈಡ್‌ಗಳು ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುತ್ತದೆ ಇದು ಹೃದ್ರೋಗಕ್ಕೆ ಕಾರಣವಾಗಬಹುದು.

ಪೇರಲೆಯು ಪೌಷ್ಟಿಕ ಮತ್ತು ಆರೋಗ್ಯಕರ ಹಣ್ಣಾಗಿದ್ದು, ಹಲವು ಪ್ರಮುಖ ಪೋಷಕಾಂಶಗಳನ್ನು ಒಳಗೊಂಡಿದೆ. ಇದರಲ್ಲಿ ವಿಟಮಿನ್ ಸಿ ಇದ್ದು, ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಪೇರಲೆಯನ್ನು ತಿನ್ನುವುದು ಸಾಮಾನ್ಯ ಸೋಂಕುಗಳು ಮತ್ತು ರೋಗಗಳಿಂದ ರಕ್ಷಿಸುತ್ತದೆ.

ಸೀಬೆ ಹಣ್ಣು ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಹೊಂದಿದೆ, ಇದು ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗುವುದನ್ನು ತಡೆಯುತ್ತದೆ. ಇದಲ್ಲದೇ ಫೈಬರ್ ಅಂಶವೂ ಅಧಿಕವಾಗಿದ್ದು, ಇದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ನಿಯಂತ್ರಣದಲ್ಲಿದೆ.

ಪೇರಲೆ ಅನೇಕ ಪೋಷಕಾಂಶಗಳನ್ನು ಒಳಗೊಂಡಿರುವುದರಿಂದ ಇದನ್ನು ಸೂಪರ್ ಫುಡ್ ಎಂದೂ ಕರೆಯುತ್ತಾರೆ. ಇದರಲ್ಲಿರುವ ಫೋಲಿಕ್ ಆಮ್ಲ ಮತ್ತು ವಿಟಮಿನ್ ಬಿ ಮಕ್ಕಳ ನರಮಂಡಲದ ಬೆಳವಣಿಗೆಗೆ ಸಹಾಯ ಮಾಡುತ್ತದೆ ಮತ್ತು ನರವೈಜ್ಞಾನಿಕ ಅಸ್ವಸ್ಥತೆಗಳನ್ನು ತಡೆಯುತ್ತದೆ. ಅದಕ್ಕಾಗಿಯೇ ಗರ್ಭಾವಸ್ಥೆಯಲ್ಲಿ ಪೇರಲೆಯನ್ನು ಸೇವಿಸುವುದು ಪ್ರಯೋಜನಕಾರಿಯಾಗಿದೆ.

ದಿನಾ ಒಂದು ಸೀಬೆ ಹಣ್ಣನ್ನು ತಿನ್ನುವುದರಿಂದ ಒತ್ತಡ ನಿಯಂತ್ರಣಕ್ಕೆ ಬರುತ್ತದೆ ಎಂದು ನಂಬಲಾಗಿದೆ. ಈ ಹಣ್ಣಿನಲ್ಲಿರುವ ಮೆಗ್ನೀಸಿಯಮ್ ಸ್ನಾಯುಗಳನ್ನು ಸಡಿಲಗೊಳಿಸುತ್ತದೆ ಮತ್ತು ಮನಸ್ಸನ್ನು ಶಾಂತವಾಗಿಡುತ್ತದೆ.


Spread the love

LEAVE A REPLY

Please enter your comment!
Please enter your name here