ಮಂಡ್ಯ: ಬರೋಬ್ಬರಿ 11 ಪ್ರಕರಣದಲ್ಲಿ ಆರೋಪಿಯಾಗಿದ್ದ ರೌಡಿಶೀಟರ್ ಮುತ್ತುರಾಜು ಅಲಿಯಾಸ್ ಡಕ್ಕ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಚಿಕ್ಕಮಲಗೂಡು ಗ್ರಾಮದಲ್ಲಿ ನಡೆದಿದೆ. ಆರೋಪಿ ಮುತ್ತುರಾಜನನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸ್ ಪೇದೆ ಸಿದ್ದರಾಜು ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ.
Advertisement
ಈ ವೇಳೆ ಆತ್ಮರಕ್ಷಣೆಗೆ ಹಲಗೂರು ಸರ್ಕಲ್ ಇನ್ಸ್ಪೆಕ್ಟರ್ ಶ್ರೀಧರ್, ಮುತ್ತುರಾಜ್ನ ಬಲಗಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಗಾಯಾಳು ರೌಡಿಶೀಟರ್ ಮುತ್ತುರಾಜು ಅನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿದ್ದಾರೆ.