ಕೊಪ್ಪಳ: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಚೈನ್ ಲಿಂಕ್ ಕಟ್ ಆಗಿ ಅಪಾರ ಪ್ರಮಾಣದ ನೀರು ಹೊರಬರುತ್ತಿರುವ ಹಿನ್ನೆಲೆಯಲ್ಲಿಘಟನಾ ಸ್ಥಳಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಭೇಟಿ ಕೊಟ್ಟಿದ್ದಾರೆ. ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು ಗೇಟ್ ಲಿಂಕ್ ಚೈನ್ ಕಟ್ ಆಗಿರುವುದನ್ನು ಖುದ್ದು ಪರಿಶೀಲನೆ ನಡೆಸಿದರು.
ಕೊಪ್ಪಳ ತಾಲೂಕಿನ ಮುನಿರಾಅಬಾದ್ ಬಳಿ ಇರುವ ತುಂಗಭದ್ರಾ ಡ್ಯಾಂ ನ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿದ್ದು, ನದಿಪಾತ್ರದ ಜನರಲ್ಲಿ ಪ್ರವಾಹ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ತುಂಗಭದ್ರಾ ಡ್ಯಾಂ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಡಿಸಿಎಂ ಅವರಿಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಮತ್ತಿತರರು ಸಾಥ್ ನೀಡಿದರು.



