ಬೆಂಗಳೂರು: ಎನ್ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕು ಎನ್ನುವ ಆಸೆ ಇದೆ. ಒಂದುವೇಳೆ ಅದು ಸಾಧ್ಯ ವಾಗಿಲ್ಲ ಅಂದರೆ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ದೆಹಲಿಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎನ್ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕು ಎನ್ನುವ ಆಸೆ ಇದೆ.
ಒಂದುವೇಳೆ ಅದು ಸಾಧ್ಯ ವಾಗಿಲ್ಲ ಅಂದರೆ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಈಗಾಗಲೇ ನಮ್ಮ ಕ್ಷೇತ್ರದ ಜನರು ಹಲವು ಬಾರಿ ಸ್ವತಂತ್ರವಾಗಿ ನಿಂತರೂ ನನ್ನನ್ನು ಗೆಲ್ಲಿಸಿದ್ದಾರೆ. ಮೈತ್ರಿ ಅಭ್ಯರ್ಥಿಯಾಗಲು ಸಾಧ್ಯವಿಲ್ಲ ಎಂದಾದರೆ ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಹೊರತು ಕಾಂಗ್ರೆಸ್ಗೆ ಸೇರಲ್ಲ. ಇದುವರೆಗೆ ನನ್ನನ್ನು ಯಾವುದೇ ಕಾಂಗ್ರೆಸ್ ನಾಯಕರು ಸಂಪರ್ಕಿಸಿಲ್ಲʼʼ ಎಂದು ಯೋಗೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಇನ್ನೂ ಈಗಾಗಲೇ ನಮ್ಮ ರಾಜ್ಯ ನಾಯಕರು ಕೂಡ ನನ್ನ ಸ್ಪರ್ಧೆಯ ಬಗ್ಗೆ ಭರವಸೆ ನೀಡಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಸ್ವಲ್ಪ ಮುಂಗೋಪ ಅಷ್ಟೇ. ಆದರೆ ಅಂತಿಮವಾಗಿ ಅವರ ಜತೆ ವರಿಷ್ಠರು ಮಾತಾಡಿದ ಬಳಿಕ ನನ್ನ ಸ್ಪರ್ಧೆಗೆ ಅವರೂ ಒಪ್ಪಿಗೆ ಸೂಚಿಸುವ ಭರವಸೆ ಇದೆ ಎಂದರು.