ಬೆಳಗಾವಿ: ಬಾಂಗ್ಲಾದೇಶ ಹಿಂಸಾಚಾರ ಘಟನೆ ಖಂಡಿಸಿ ಶ್ರೀರಾಮ ಸೇನೆ ಹಾಗೂ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಕೆಲ ದಿನಗಳಿಂದ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಘಟನೆ ನಡೆಯುತ್ತಿದೆ.
ಬಾಂಗ್ಲಾದಲ್ಲಿನ ಜಿಹಾದಿಗಳು ಹಿಂದೂಗಳನ್ನೆ ಟಾರ್ಗೆಟ್ ಮಾಡಿ ಹಲ್ಲೆ ಮಾಡುತ್ತಿದ್ದಾರೆ. ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ರ್ಯಾಲಿ ಮೂಲಕ ಹಿಂದೂಗಳನ್ನ ರಕ್ಷಣೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.



