ಶಿವಮೊಗ್ಗ: ಯಡಿಯೂರಪ್ಪ ಕುಟುಂಬದ ಕೈಗೆ ಅಧಿಕಾರ ನೀಡಿದ್ದಕ್ಕೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 25 ಸೀಟಿನಿಂದ 17 ಸೀಟಿಗೆ ಇಳಿದಿದೆ ಎಂದು ಕೆ.ಎಸ್.ಈಶ್ವರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯ ವೇಳೆಗೆ ವಿಜಯೇಂದ್ರರನ್ನು ಪಕ್ಷದ ಅಧ್ಯಕ್ಷರಾಗಿ ಮಾಡಿದ್ದು,
ಎಲ್ಲರಿಗೂ ಅಚ್ಚರಿ ಉಂಟುಮಾಡಿತ್ತು. ಯಡಿಯೂರಪ್ಪ ಕುಟುಂಬದ ಕೈಗೆ ಅಧಿಕಾರ ನೀಡಿದ್ದಕ್ಕೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 25 ಸೀಟಿನಿಂದ 17 ಸೀಟಿಗೆ ಇಳಿದಿದೆ ಎಂದು ಟೀಕಿಸಿದರು.
ಇನ್ನೂ ಈ ಹಿಂದೆ ನಮ್ಮ ಪಕ್ಷದಲ್ಲಿ ಸಾಮೂಹಿಕ ನಾಯಕತ್ವ ಇತ್ತು. ಸಾಮೂಹಿಕ ನಾಯಕತ್ವದಲ್ಲಿಯೇ ಕೋರ್ ಕಮಿಟಿಯಲ್ಲಿ ಚರ್ಚೆ ನಡೆಯುತ್ತಿತ್ತು. ಯಡಿಯೂರಪ್ಪ ಸ್ವಜನ ಪಕ್ಷಪಾತ ಮಾಡಿದ್ದಾರೆ. ಬಿಜೆಪಿಯಲ್ಲಿ ಹಿಂದೂತ್ವವೇ ಹೊರಟು ಹೋಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.



