ರಾಜ್ಯದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ನೇಮಕ: ಅಧಿಕೃತ ಆದೇಶ ಪ್ರಕಟ!

0
Spread the love

ಬೆಂಗಳೂರು:- ಕರ್ನಾಟಕದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ.

Advertisement

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಕರ್ನಾಟಕ ಸೇರಿ ಮೂರು ರಾಜ್ಯಗಳ ಮಹಿಳಾ ಕಾಂಗ್ರೆಸ್‌ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಮಹಿಳಾ ಕಾಂಗ್ರೆಸ್‌ಗೆ ಸೌಮ್ಯಾ ರೆಡ್ಡಿ ನೇಮಕವಾಗಿದ್ದಾರೆ.

ಇನ್ನೂ ಸೌಮ್ಯಾ ರೆಡ್ಡಿ ಅವರು 2018ರ ವಿಧಾನಸಭೆ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. 2023ರ ಚುನಾವಣೆಯಲ್ಲಿ ಕೇವಲ 16 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಸಿ.ಕೆ. ರಾಮಮೂರ್ತಿ ಎದುರು ಸೋತಿದ್ದರು.

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಕೈ ಅಭ್ಯರ್ಥಿ ಸೌಮ್ಯಾ ರೆಡ್ಡಿ ಸೋಲು ಕಂಡಿದ್ದರು.


Spread the love

LEAVE A REPLY

Please enter your comment!
Please enter your name here