Karnataka Rain: ದಕ್ಷಿಣ ಒಳನಾಡಿನಲ್ಲಿ ಹೆಚ್ಚಲಿದೆ ಮಳೆಯ ಅಬ್ಬರ: ಆರೆಂಜ್, ಯೆಲ್ಲೋ ಅಲರ್ಟ್!

0
Spread the love

ಬೆಂಗಳೂರು:- ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಚಿತ್ರದುರ್ಗ, ರಾಮನಗರ, ತುಮಕೂರಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ.ಎಚ್​ಎಎಲ್​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 34.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here