ವಿಜಯಸಾಕ್ಷಿ ಸುದ್ದಿ, ಗದಗ : ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆ ವತಿಯಿಂದ ಆಯೋಜಿಸಿದ್ದ 2023-24 ಸಾಲಿನ ರಾಷ್ಟ್ರಮಟ್ಟದ ಚಿಣ್ಣರ ಚಿತ್ರ ಚಿತ್ತಾರ ಸ್ಪರ್ಧೆಯಲ್ಲಿ ನೂರಕ್ಕಿಂತ ಹೆಚ್ಚು ವಿದ್ಯಾರ್ಥಿಗಳನ್ನು ಚಿತ್ರ ಕಲೋತ್ಸವದಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಿ ಮಕ್ಕಳ ಕಲಾ ಪ್ರತಿಭೆಯನ್ನು ಪ್ರದರ್ಶಿಸಲು ಪ್ರೇರಣೆ ನೀಡಿದ ನಗರದ ವಿದ್ಯಾದಾನ ಸಮಿತಿಯ ಕ್ಲಾಸಿಕ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಎಂ.ಆರ್. ಡೊಳ್ಳಿನ ಗದುಗಿನ ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆ ವತಿಯಿಂದ ಕೊಡಮಾಡುವ ರಾಷ್ಟ್ರಮಟ್ಟದ ದೃಶ್ಯಕಲಾ ಚಿಂತನಕಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಆಗಸ್ಟ್ 17, 18ರಂದು ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಏರ್ಪಡಿಸಲಾಗಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿವರು ಹಾಗೂ ಗಣ್ಯರ ಸಮ್ಮುಖದಲ್ಲಿ ಎಂ.ಆರ್. ಡೊಳ್ಳಿನರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ರಾಷ್ಟ್ರಮಟ್ಟದ ಪ್ರಶಸ್ತಿಗೆ ಭಾಜನರಾದ ಡೊಳ್ಳಿನರಿಗೆ ಸಂಸ್ಥೆಯ ಅಧ್ಯಕ್ಷ ಡಿ.ಬಿ. ಹುಯಿಲಗೋಳ, ಕಾರ್ಯದರ್ಶಿ ಶ್ರೀನಿವಾಸ ಹುಯಿಲಗೋಳ, ಆಡಳಿತ ಅಧಿಕಾರಿಗಳಾದ ಡಾ. ಗಂಗೂಬಾಯಿ ಪವಾರ, ನಿರ್ದೇಶಕರಾದ ಡಾ. ಪವನ್ ಎಸ್.ಹುಯಿಲಗೋಳ, ಶೈಕ್ಷಣಿಕ ಮಾರ್ಗದರ್ಶಕರಾದ ಪ್ರತೀಕ ಎಸ್.ಹುಯಿಲಗೋಳ, ಕ್ಲಸ್ಟರ್ ಸಂಖ್ಯೆ 4ರ ಸಮೂಹ ಸಂಪನ್ಮೂಲ ವ್ಯಕ್ತಿ ರವಿ ಎಂ.ಹೆಬ್ಬಳ್ಳಿ, ಶಾಲೆಯ ಶಿಕ್ಷಕರು, ಸಿಬ್ಬಂದಿ ವರ್ಗದವರು, ಪಾಲಕರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.



