ಜಿಲ್ಲಾ ಕಾಂಗ್ರೆಸ್‌ನಿಂದ ಸ್ವಾತಂತ್ರೋತ್ಸವ ದಿನಾಚರಣೆ

0
Independence Day Celebration by District Congress
Spread the love

ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಆ.15ರಂದು ಗುರುವಾರ ಬೆಳಿಗ್ಗೆ 8 ಗಂಟೆಗೆ 78ನೇ ಸ್ವಾತಂತ್ರೋತ್ಸವ ದಿನಾಚರಣೆ ಆಯೋಜಿಸಲಾಗಿದೆ.

Advertisement

ಕಾರ್ಯಕ್ರಮದ ಧ್ವಜಾರೋಹಣವನ್ನು ಗದಗ ಜಿಲ್ಲಾ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷರೂ ಆಗಿರುವ, ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ ನೆರವೇರಿಸುವರು.

ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ಬಿ.ಆರ್. ಯಾವಗಲ್, ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಪಕ್ಷದ ಮುಖಂಡರಾದ ಆನಂದಸ್ವಾಮಿ ಗಡ್ಡದೇವರಮಠ, ಸುಜಾತಾ ದೊಡ್ಡಮನಿ ಆಗಮಿಸುವರು.

ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಮಾಜಿ ಹಾಗೂ ಹಾಲಿ ಶಾಸಕರು, ಪಕ್ಷದ ಜಿಲ್ಲಾ ಪಧಾದಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ-ತಾಲೂಕು ಪಂಚಾಯತ, ಪಂಚಾಯತ, ಎಪಿಎಂಸಿ ಪಕ್ಷದ ಅಧ್ಯಕ್ಷರು ಹಾಗೂ ಸದಸ್ಯರು, ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆ ಅಧ್ಯಕ್ಷರು ಹಾಗೂ ಸದಸ್ಯರು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್‌ಸಿ/ಎಸ್‌ಟಿ, ಅಲ್ಪಸಂಖ್ಯಾತರ, ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗ, ಸಾಮಾಜಿಕ ಜಾಲತಾಣ, ರಾಜೀವಗಾಂಧಿ ಪಂಚಾಯತ ಸಂಘಟನೆ, ಮಾಜಿ ಸೈನಿಕರ ವಿಭಾಗ, ಮೀನುಗಾರ ವಿಭಾಗ, ಕಾರ್ಮಿಕರ ವಿಭಾಗ, ಐಎನ್‌ಟಿಯುಸಿ ಕಾನೂನು ಮತ್ತು ಮಾನವ ಹಕ್ಕು ವಿಭಾಗ, ಕಿಸಾನ್ ಮತ್ತು ಖೆತ್ ಮಜದೂರ ವಿಭಾಗ, ಮಾಜಿ ಸೈನಿಕರ ವಿಭಾಗ, ವೈದ್ಯರ ವಿಭಾಗ, ವೃತ್ತಿಪರ ವಿಭಾಗ, ಪದವೀಧರ ಹಾಗೂ ಶಿಕ್ಷಕರ ವಿಭಾಗ, ನೀತಿ ಮತ್ತು ಸಂಶೋಧನೆ ತರಬೇತಿ ವಿಭಾಗ, ವಿಕಲಚೇತನರ ವಿಭಾಗ, ಲೀಗಲ್ ರಿಪಾರ್ಮ್ಸ್ ವಿಭಾಗ, ಐಟಿ ಮತ್ತು ಡಾಟಾ ವಿಭಾಗ, ಮಾಧ್ಯಮ ಮತ್ತು ಸಂಪರ್ಕ ಇಲಾಖೆ ವಿಭಾಗ, ಪಕ್ಷದ ಅಭಿಮಾನಿಗಳು ಪಾಲ್ಗೊಳ್ಳಬೇಕೆಂದು ಗದಗ-ಬೆಟಗೇರಿ ಶಹರ ಕಾಂಗ್ರೆಸ ಸಮಿತಿಯ ಅಧ್ಯಕ್ಷ ಬಿ.ಬಿ. ಅಸೂಟಿ ಹಾಗೂ ಗದಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ ಮಂದಾಲಿಯವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here