ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!

0
Spread the love

ಹಾಸನ: ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಕೆರೆಬೀದಿಯಲ್ಲಿ ನಡೆದಿದೆ. ಶ್ರೀನಿವಾಸ್ (43), ಶ್ವೇತಾ (36) ಹಾಗೂ ನಾಗಶ್ರೀ (13) ಮೃತ ದುರ್ದೈವಿಗಳಾಗಿದ್ದು, ಶ್ರೀನಿವಾಸ್‌ ಕಾರು ಚಾಲಕರಾಗಿದ್ದರೆ, ಶ್ವೇತಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಶ್ರೀನಿವಾಸ್‌ ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಕಳೆದ ಮಂಗಳವಾರ ಈ ಮೂವರು ಏಕಾಏಕಿ ಕಾಣಿಯಾಗಿದ್ದರು. ಸಂಬಂಧಿಗಳು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಆದರೆ ಇವರ ಸುಳಿವು ಸಿಕ್ಕಿರಲಿಲ್ಲ.

Advertisement

ಕುಟುಂಬಸ್ಥರು ನಂತರ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಿನ್ನೆ ಬುಧವಾರ ಸಂಜೆ ಬಾಗೂರು ಹೋಬಳಿ, ಮುದ್ಲಾಪುರ ಬಳಿಯ ನಾಲೆಯಲ್ಲಿ ಶ್ರೀನಿವಾಸ್, ಶ್ವೇತಾ ಶವ ಪತ್ತೆಯಾಗಿದೆ. ಹೇಮಾವತಿ ನಾಲೆಗೆ ಹಾರಿ ಮೂವರು ಆತ್ಮಹತ್ಯೆಗೆ ಶರಣಾಗಿರುವುದು ಗೊತ್ತಾಗಿದೆ.

ಅಗ್ನಿಶಾಮಕ ದಳದ‌ ಸಿಬ್ಬಂದಿ ಹಾಗೂ ಪೊಲೀಸರು ದಂಪತಿಯ ಶವವನ್ನು ಹೊರ ತೆಗೆದಿದ್ದಾರೆ. ಸದ್ಯ ಬಾಲಕಿ ನಾಗಶ್ರೀ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ಎಸ್‌ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನುಗ್ಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 


Spread the love

LEAVE A REPLY

Please enter your comment!
Please enter your name here