ತುಮಕೂರು: ಸ್ವಾತಂತ್ರ್ಯ ದಿನಾಚರಣೆ ದಿನವೇ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಹೆಚ್ ಕಾವಲ್ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. 8 ವರ್ಷದ ಹೇಮಂತ್ ಮೃತ ವಿದ್ಯಾರ್ಥಿಯಾಗಿದ್ದು,
Advertisement
ಶಾಲೆಯ ಪಕ್ಕದ ವಿದ್ಯುತ್ ಕಂಬದಿಂದ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾನೆ. ಕೆಇಬಿ ಇಲಾಖೆ ನಿರ್ಲಕ್ಷ್ಯ ಬೇಜಾವ್ದಾರಿಗೆ ಹೇಮಂತ್ ಸಾವನ್ನಪ್ಪಿದ್ದಾನೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.