ಮಕ್ಕಳಲ್ಲಿ ರಾಷ್ಟ್ರಾಭಿಮಾನ ಬೆಳೆಯಲಿ : ರಂಭಾಪುರಿ ಶ್ರೀಗಳು

0
78th Independence Day Flag Hoisting
Spread the love

ವಿಜಯಸಾಕ್ಷಿ ಸುದ್ದಿ, ಬಾಳೆಹೊನ್ನೂರು : ಭಾರತ ಸ್ವಾತಂತ್ರ್ಯ ಪಡೆದು 78 ವರ್ಷಗಳಾಯಿತು. ಎಲ್ಲ ವರ್ಗದ ಜನತೆಯಲ್ಲಿ ದೇಶಾಭಿಮಾನ ಮತ್ತು ರಾಷ್ಟ್ರ ಶ್ರದ್ಧೆ ಬೆಳೆದುಕೊಂಡು ಬರಬೇಕಾಗಿದೆ. ಬೆಳೆಯುವ ಮಕ್ಕಳಲ್ಲಿ ರಾಷ್ಟ್ರ ಭಕ್ತಿ-ಸಾಮರಸ್ಯ ಮತ್ತು ಸೌಹಾರ್ದತೆಗಳನ್ನು ಬೆಳೆಸುವ ಅಗತ್ಯವಿದೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

Advertisement

ಅವರು ಗುರುವಾರ ಶ್ರೀ ರಂಭಾಪುರಿ ಪೀಠದ ಶ್ರೀ ಜಗದ್ಗುರು ರುದ್ರಮುನೀಶ್ವರ ವಸತಿ ಪ್ರೌಢಶಾಲೆ ಹಾಗೂ ಶ್ರೀ ವೀರಭದ್ರಸ್ವಾಮಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ 78ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಆಶೀರ್ವಚನ ನೀಡುತ್ತಿದ್ದರು.

ಸ್ವಾತಂತ್ರ್ಯ ಎಂದರೆ ಸ್ವೇಚ್ಛಾಚಾರಿಯಾಗಿ ಬಾಳುವುದಲ್ಲ. ದೇಶಕ್ಕಾಗಿ, ನಾಡು ನುಡಿಗಾಗಿ ನಮ್ಮನ್ನು ನಾವು ಅರ್ಪಿಸಿಕೊಂಡು ಕಾರ್ಯ ಕೈಗೊಂಡರೆ ಯಶಸ್ಸು ಕಟ್ಟಿಟ್ಟ ಬುತ್ತಿ. ಜಾತ್ಯಾತೀತವಗಿ ಪಕ್ಷಾತೀತವಾಗಿ ನಮ್ಮ ರಾಜಕೀಯ ಧುರೀಣರು ಶ್ರಮಿಸಿ ಸದೃಢ ಸಶಕ್ತ ದೇಶವನ್ನು ಕಟ್ಟುವ ಸಂಕಲ್ಪ ಅವರದಾಗಲಿ ಎಂದರು.

ಹುಡುಗಿ ಹಿರೇಮಠದ ವಿರೂಪಾಕ್ಷಲಿಂಗ ಶಿವಾಚಾರ್ಯರು, ಕಡೆನಂದಿಹಳ್ಳಿ ರೇವಣಸಿದ್ಧೇಶ್ವರ ಶಿವಾಚಾರ್ಯರು ಹಾಗೂ ಕಾರ್ಜುವಳ್ಳಿ ಹಿರೇಮಠದ ಸದಾಶಿವ ಶಿವಾಚಾರ್ಯರು ಉಪಸ್ಥಿತರಿದ್ದರು.

ಪ್ರೌಢ ಶಾಲಾ ಮುಖ್ಯೋಪಾಧ್ಯಾಯೆ ಸುಜಾತಾ ಅಳವಂಡಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯೆ ಮಹಾದೇವಿ ಪಾಟೀಲ, ಗ್ರಾ.ಪಂ ಸದಸ್ಯರಾದ ಜಗದೀಶ್ಚಂದ್ರ ಮತ್ತು ಮಹೇಶಾಚಾರಿ ಹಾಗೂ ಸಹಶಿಕ್ಷಕರು, ಅಭಿಮಾನಿಗಳು ಉಪಸ್ಥಿತರಿದ್ದರು. ದೈಹಿಕ ಶಿಕ್ಷಕ ನಿಜಗುಣಿ ಕಟ್ಟೇಗೌಡರು ಕಾರ್ಯಕ್ರಮ ನಿರೂಪಿಸಿದರು.


Spread the love

LEAVE A REPLY

Please enter your comment!
Please enter your name here