ತುಮಕೂರು: ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಟಿ.ಎನ್.ಬೆಟ್ಟದ ಹೊರವಲಯದ ಜಮೀನಿನಲ್ಲಿ ನಡೆದಿದೆ.
ಅನಿಲ್ ಕುಮಾರ್(29), ಪುಟ್ಟರಾಜು(35) ಮೃತ ದುರ್ದೈವಿಗಳಾಗಿದ್ದು, ಜಮೀನಿನಲ್ಲಿ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಇನ್ನೂ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ, ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.



