ಚಾಮರಾಜನಗರ:- ಸಾಲಬಾಧೆಯಿಂದ ಬೇಸತ್ತು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಳ್ಳೇಗಾಲದ ನಾರಾಯಣಸ್ವಾಮಿ ಗುಡಿ ಬೀದಿಯಲ್ಲಿ ಜರುಗಿದೆ.
56 ವರ್ಷದ ನಾಗೇಶ್, 46 ವರ್ಷದ ಪತ್ನಿ ಸತ್ಯಲಕ್ಷ್ಮೀ ಮೃತ ದುರ್ದೈವಿಗಳು ಎನ್ನಲಾಗಿದೆ. ದಂಪತಿ ಕಳೆದ ಆರು ತಿಂಗಳಿಂದ ಮೈಸೂರಿನಲ್ಲಿ ವಾಸವಾಗಿದ್ದರು. ಶನಿವಾರ ರಂದು ರಾತ್ರಿ ಕೊಳ್ಳೇಗಾಲಕ್ಕೆ ಬಂದಿದ್ದಾರೆ. ಬೆಳಗಿನ ಜಾವ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದಂಪತಿ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದು, ತೀರಿಸಲಾಗದೆ ಆತ್ಮಹತ್ಯೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಕೊಳ್ಳೇಗಾಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.



