ಕ್ರೀಡೆಯಿಂದ ದೈಹಿಕ ಸದೃಢತೆ ಸಾಧ್ಯ : ಜಿ.ಎಸ್. ಪಾಟೀಲ

0
Undergraduate taluk level sports meet
Spread the love

ವಿಜಯಸಾಕ್ಷಿ ಸುದ್ದಿ, ಡಂಬಳ : ಪ್ರತಿಯೊಬ್ಬರೂ ಯಾವುದಾದರೊಂದು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ದೈಹಿಕವಾಗಿ ಸಧೃಡರಾಗಬೇಕು. ಕ್ರೀಡೆಗಳು ಮನುಷ್ಯನ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವನ್ನು ಸ್ಥಿರವಾಗಿರಿಸುತ್ತದೆ. ಅಲ್ಲದೇ ದಿನಪೂರ್ತಿ ಉತ್ಸಾಹದಿಂದ ಕಾರ್ಯನಿರ್ವಹಿಸಲು ಸಹಕಾರಿಯಾಗಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.

Advertisement

ಡಂಬಳ ಗ್ರಾಮದ ಜಗದ್ಗರು ತೋಂಟದಾರ್ಯದ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ ಪದವಿಪೂರ್ವ ತಾಲೂಕು ಮಟ್ಟದ ಕ್ರೀಡಾ ಕೂಟಕ್ಕೆ ಚಾಲನೆ ಮಾತನಾಡಿದ ಅವರು, ಉತ್ತಮ ಕಲಿಕೆಗೆ ಮಕ್ಕಳು ಆರೋಗ್ಯವಂತರಾಗಿರಬೇಕು. ವಿದ್ಯಾರ್ಥಿಗಳು ಓದಿಗಷ್ಟೇ ಸೀಮಿತವಾದರೆ ಮಾನಸಿಕ ಒತ್ತಡ ಹೆಚ್ಚುತ್ತದೆ. ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಒತ್ತಡ ನಿವಾರಣೆಯಾಗುತ್ತದೆ. ಕ್ರೀಡೆಗಳಿಂದ ಸ್ಪರ್ಧಾ ಮನೋಭಾವ ಮೂಡುತ್ತದೆ. ಆದ್ದರಿಂದ ಶಿಕ್ಷಕರು ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಬೇಕು ಎಂದರು.

ತೋಂಟದಾರ್ಯ ಮಠದ ವ್ಯವಸ್ಥಾಪಕ ಜಿ.ವ್ಹಿ. ಹಿರೇಮಠ ಮಾತನಾಡಿ, ಕ್ರೀಡಾ ಚಟುವಟಿಕೆಗಳು ಸಮಗ್ರ ಶಿಕ್ಷಣದ ಭಾಗ. ಕ್ರೀಡೆಯಿಂದ ಆರೋಗ್ಯ ಸುಧಾರಿಸುತ್ತದೆ. ಓದಿನಲ್ಲಿ ಆಸಕ್ತಿ ಮೂಡಿಸಲು ಕ್ರೀಡಾ ಚಟುವಟಿಕೆಗಳು ಸಹಕಾರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ತೋಂಟದಾರ್ಯ ವಿದ್ಯಾಪೀಠದ ಆಡಳಿತಧಿಕಾರಿ ಎಸ್.ಎಸ್. ಪಟ್ಟಣಶೆಟ್ಟರ್, ಗೋಣಿಬಸಪ್ಪ ಕೊರ್ಲಹಳ್ಳಿ, ಸಿ.ಕೆ. ಬೆಳವಟಿಗಿ, ವಿರೂಪಾಕ್ಷ ಲಕ್ಕುಂಡಿ, ಶಿಕ್ಷಕ ಪ್ರಕಾಶ ತಳವಾರ, ಮಲ್ಲಿಕಾರ್ಜನ ಮಡಿವಾಳರ, ಬಸವರಾಜ ಪೂಜಾರ, ವಾಯ್ ಬಿಳಗಿ, ವಿ.ಎಫ್. ಪಾಟೀಲ, ಹನಮಂತ ಪೂಜಾರ, ಎಸ್.ಎನ್. ಕಲ್ಲಿಗನೂರ, ಎಸ್. ಸಂಕಣ್ಣವರ ಮುಂತಾದವರಿದ್ದರು.


Spread the love

LEAVE A REPLY

Please enter your comment!
Please enter your name here