ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ಕೋವಿಡ್-19 ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಏಕತಾ ಕಪ್ ಕ್ರಿಕೆಟ್ ಟೂರ್ನಮೆಂಟ್ ನಾಳೆಯಿಂದ ಎರಡು ದಿನಗಳ ಕಾಲ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಪ್ರತಿ ವರ್ಷದಂತೆ ಈ ಸಲವೂ ಸಹ ನಗರದ ಕರ್ನಾಟಕ ವಾರಿಯರ್ಸ್ ಸ್ಪೋರ್ಟ್ಸ್ ಕ್ಲಬ್ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಿದ್ದು, ಕ್ಲಬ್ನ ಸದಸ್ಯರ ಆರು ತಂಡಗಳು ಇದರಲ್ಲಿ ಭಾಗವಹಿಸಲಿವೆ. ಎರಡು ದಿನಗಳ ಕಾಲ ಏಳು ಪಂದ್ಯಗಳು ನಡೆಯಲಿದ್ದು ನವೆಂಬರ್ 28ರ ಬೆಳಗ್ಗೆ 7-30ಕ್ಕೆ ಟೂರ್ನಮೆಂಟ್ನ ಮೊದಲ ಪಂದ್ಯ ನಡೆಯಲಿದೆ.
ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಉದ್ಘಾಟಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್ ಟೂರ್ನಮೆಂಟ್ಗೆ ಚಾಲನೆ ನೀಡುವರು. ಕೊಪ್ಪಳ ಗ್ರಾಮೀಣ ಸಿಪಿಐ ವಿಶ್ವನಾಥ್ ಹಿರೇಗೌಡರ್, ನಗರ ಸಿಪಿಐ ಮಾರುತಿ, ಡಿಸಿಐಬಿಯ ಪಿಐ ರವಿ ವಕ್ಕುಂದ, ಸಂಚಾರ ಠಾಣೆಯ ಪಿಎಸ್ಐ ಅಮರೇಶ್ ಹುಬ್ಬಳ್ಳಿ ಉದ್ಘಾಟನಾ ಸಮಾರಂಭದಲ್ಲಿ ಅತಿಥಿಗಳಾಗಿ ಭಾಗವಹಿಸುವರು. ಹಿರಿಯ ಪತ್ರಕರ್ತ ಬಸವರಾಜ ಕರುಗಲ್ ಸಮಾರಂಭದ ಅಧ್ಯಕ್ಷತೆ ವಹಿಸುವರು ಎಂದು ಕ್ಲಬ್ನ ಅಧ್ಯಕ್ಷ ವಿನೋದ್ ಚಿನ್ನಿನಾಯ್ಕರ್ ಮತ್ತು ಹಿರಿಯ ಮುಖಂಡ ಗಿರೀಶ್ ಮುಂಡದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.