ಸಿಸಿಬಿ ಪೊಲೀಸರ ಕಾರ್ಯಾಚರಣೆ: ನಿಷೇಧಿತ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್!

0
Spread the love

ಬೆಂಗಳೂರು:- ನಗರದಲ್ಲಿ ನಿಷೇಧಿತ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು CCB ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ಬಂಧಿತರನ್ನು ಕೈಸರ್ ಪಾಷಾ, ರಬಿಲ್ ಷರೀಫ್, ಮಹಮ್ಮದ್ ಅದ್ನಾನ್ ಬಂಧಿತರು ಎಂದು ಗುರುತಿಸಲಾಗಿದೆ. ಆರೋಪಿಗಳು ಇ ಸಿಗರೇಟ್ ಗಳನ್ನು ಶೇಖರಿಸಿಟ್ಟು ಮಾರಾಟ ಮಾಡುತ್ತಿದ್ದರು.

ಖಚಿತ ಮಾಹಿತಿ ಮೇರೆಗೆ ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ದ್ರವ್ಯ ನಿಗ್ರಹದಳದ ಅಧಿಕಾರಿಗಳು ದಾಳಿ ನಡೆಸಿದರು. ಈ ವೇಳೆ ನಿಷೇಧಿತ ಇ-ಸಿಗರೇಟ್ ಪತ್ತೆಯಾಗಿದೆ.

ಬಂಧಿತರಿಂದ 30 ಲಕ್ಷ ಮೌಲ್ಯದ ಇ-ಸಿಗರೇಟ್‌ಗಳು ವಶಕ್ಕೆ ಪಡೆಯಲಾಗಿದ್ದು, ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here