ಅರ್ಚಕನ ಜತೆ ಚಾಟಿಂಗ್: ಫೇಸ್ಬುಕ್ ಸುಂದರಿ ನಂಬಿ ಲಕ್ಷ-ಲಕ್ಷ ಕಳೆದುಕೊಂಡ ಪುರೋಹಿತ!

0
Spread the love

ಮಂಡ್ಯ:– ಜಿಲ್ಲೆಯ ಪಾಂಡವಪುರದ ಪಟ್ಟಸೋಮನಹಳ್ಳಿಯಲ್ಲಿ 60 ವರ್ಷದ ಅರ್ಚಕನ ಜೊತೆ ಫೇಸ್ಬುಕ್ನಲ್ಲಿ ಚಾಟಿಂಗ್ ಮಾಡಿದ ಯುವತಿ ಚೀಟಿಂಗ್ ಮಾಡಿರುವ ಆರೋಪ ಕೇಳಿ ಬಂದಿದೆ.

Advertisement

ಅರ್ಚಕ‌ ವಿಜಯ್ ಕುಮಾರ್ ಹಣ ಕಳೆದುಕೊಂಡಿದ್ದು, ಇದೀಗ ಪೂಜಾರಪ್ಪ ಸೈಬರ್ ಕ್ರೈಂ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಗ್ರಾಮದ ಶಿವಶೈಲ ದೇವಸ್ಥಾನದ ಅರ್ಚಕ‌ ವಿಜಯ್ ಕುಮಾರ್, ಕುಟುಂಬದಿಂದ ದೂರವಾಗಿ ಒಬ್ಬರೇ ವಾಸಿಸುತ್ತಿದ್ದು, ಇವರಿಗೆ ಕೆಲ ದಿನಗಳ ಹಿಂದೆ ಫೇಸ್‌ಬುಕ್‌ನಲ್ಲಿ ಸಿರಿ ಶ್ರೇಷ ಸರಿತಾ ಎಂಬ ಸುಂದರಿ ಪರಿಚಯವಾಗಿದ್ದಾಳೆ.

ಹೀಗಾಗಿ ಆಕೆ ಜತೆ ಪ್ರತಿ ದಿನ ವಿಜಯ್ ಕುಮಾರ್ ಚಾಟಿಂಗ್ ಮಾಡುತ್ತಿದ್ದರು.ವಿಜಯ್ ಕುಮಾರ್ ಬಗ್ಗೆ ತಿಳಿದುಕೊಂಡ ಯುವತಿ, ವಸತಿ, ಆರೋಗ್ಯ ಸಮಸ್ಯೆ ಅಂತ ಹೇಳಿ ಹಂತ ಹಂತವಾಗಿ ಹಣ ಪೀಕಿದ್ದಾಳೆ. ಹೀಗೆ ಸುಮಾರು 1 ಲಕ್ಷದ 40 ಸಾವಿರದಷ್ಟು ಹಣವನ್ನು ಲಪಟಾಯಿಸಿದ್ದಾಳೆ.

ಬಣ್ಣ ಬಣ್ಣದ ಮಾತುಗಳಿಂದ ವಿಜಯ್ ಕುಮಾರ್‌ಗೆ ಬಲೆ ಹಾಕಿದ ಸುಂದರಿ ಮಾತು ನಂಬಿ ಫೋನ್ ಪೇ ಮೂಲಕ ವಿಜಯ್ ಹಣ‌ ಕಳುಹಿಸಿದ್ದರು. ಹಣ ಕೊಟ್ಟ ಬಳಿಕ ಭೇಟಿ ಆಗುವಂತೆ ಸುಂದರಿಗೆ ವಿಜಯ್ ಒತ್ತಡ ಹೇರಲಾರಂಭಿಸಿದ್ದಾರೆ. ಆದರೆ, ಇಂದು, ನಾಳೆ ಎಂದು ಫೇಸ್‌ಬುಕ್‌ ಬ್ಲಾಕ್ ಮಾಡಿ ಎಸ್ಕೇಪ್ ಆಗಿದ್ದಾಳೆ.

ಸುಂದರಿ ಮಾಯವಾದ ಬಳಿಕ ತಾನು ಮೋಸ ಹೋಗಿರುವ ಬಗ್ಗೆ ವಿಜಯ್ ಕುಮಾರ್‌ಗೆ ಮನವರಿಕೆಯಾಗಿದ್ದು, ಹಣ ವಾಪಸ್ ಕೊಡಿಸುವಂತೆ ಪೊಲೀಸರ ಮೊರೆ ಹೋಗಿದ್ದಾರೆ. ಸಧ್ಯ ಪೊಲೀಸರಿಂದ ತನಿಖೆ ಮುಂದುವರಿದಿದೆ.


Spread the love

LEAVE A REPLY

Please enter your comment!
Please enter your name here