ನೆಲಮಂಗಲ: ಪಂಚಾಯಿತಿಯ ಸಿಬ್ಬಂದಿಗಳ ಮೇಲೆ ಹಲ್ಲೆ; ಸರ್ಕಾರಿ ಗೋಮಾಳ ಒತ್ತುವರಿ ಪ್ರಶ್ನಿಸಿದ್ದಕ್ಕೆ ಕೃತ್ಯ!

0
Spread the love

ನೆಲಮಂಗಲ: ನೆಲಮಂಗಲ ತಾಲೂಕಿನ ಶ್ರೀನಿವಾಸಪುರದಲ್ಲಿ ಪಂಚಾಯತಿ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆದಿರುವ ಘಟನೆ ಜರುಗಿದೆ.

Advertisement

ರಿಯಲ್ ಎಸ್ಟೇಟ್ ಮಾಫಿಯಾದ ಹತ್ತು ಜನರಿಂದ ನವೀನ್ ಕುಮಾರ್, ಯಂಜಪ್ಪರ ಮೇಲೆ ಹಲ್ಲೆ ನಡೆದಿದೆ. ಇಬ್ಬರಿಗೂ ನೆಲಮಂಗಲ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಿಯಲ್ ಎಸ್ಟೇಟ್ ರಿಂದ ಸರ್ಕಾರಿ ಗೋಮಾಳ ಒತ್ತುವರಿ ಪಶ್ನೆ ಮಾಡಿದಕ್ಕೆ ಹಲ್ಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


Spread the love

LEAVE A REPLY

Please enter your comment!
Please enter your name here