HomeGadag Newsಮಾದಕ ವಸ್ತುಗಳ ಸೇವನೆಯಿಂದ ದೂರವಿರಿ : ಡಾ.ವೆಂಕಟೇಶ ರಾಥೋಡ್

ಮಾದಕ ವಸ್ತುಗಳ ಸೇವನೆಯಿಂದ ದೂರವಿರಿ : ಡಾ.ವೆಂಕಟೇಶ ರಾಥೋಡ್

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಎಲ್ಲರ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರು ತಂಬಾಕು ವ್ಯಸನ, ಮಾದಕ ವಸ್ತುಗಳ ಸೇವನೆಯನ್ನು ತ್ಯಜಿಸಿ ಒಳ್ಳೆಯ ಆಹಾರ ಸೇವಿಸಿ ಉತ್ತಮ ಜೀವನ ಶೈಲಿ ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವೆಂಕಟೇಶ ರಾಥೋಡ್ ಹೇಳಿದರು.

ಗದಗ-ಬೆಟಗೇರಿ ನಗರಸಭೆ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ, ಜಿಲ್ಲಾ ಎನ್.ಸಿ.ಡಿ. ವಿಭಾಗ, ಎನ್.ಟಿ.ಈ.ಪಿ. ಕಾರ್ಯಕ್ರಮ, ನಗರ ಸಭೆ ಗದಗ-ಬೆಟಗೇರಿ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಪೌರಕಾರ್ಮಿಕರಿಗೆ ಆರೋಗ್ಯದ ಅರಿವು ಮತ್ತು ಆರೋಗ್ಯ ತಪಾಸಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಅಸಾಂಕ್ರಾಮಿಕ ಕಾಯಿಲೆಗಳು ಹೆಚ್ಚುತ್ತಿದ್ದು, ಇದಕ್ಕೆ ಮುಖ್ಯ ಕಾರಣ ತಂಬಾಕು ವ್ಯಸನ, ಮಾದಕ ವಸ್ತುಗಳ ಸೇವನೆ, ಆಹಾರ ಪದ್ಧತಿ ಹಾಗೂ ಜೀವನ ಶೈಲಿ. ತಂಬಾಕು ಸೇವನೆಯಿಂದ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು, ಪ್ಯಾರಲೈಸೀಸ್, ಡಯಾಬಿಟೀಸ್, ಟಿ.ಬಿ. ಎಂಬ ಮಾರಕ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ. ಎಲ್ಲರ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರು ಮಾದಕ ವಸ್ತುಗಳ ಸೇವನೆಯಿಂದ ದೂರವಿದ್ದು ತಮ್ಮ ಆರೋಗ್ಯದ ಬಗ್ಗೆ ಗಮನ ಹರಿಸಬೇಕು ಎಂದು ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವೆಂಕಟೇಶ ರಾಥೋಡ್ ಹೇಳಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರಾದ ಗೋಪಾಲ ಸುರಪುರ ಮಾತನಾಡಿ, ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮವನ್ನು ತಿಳಿಸಿ, ತಂಬಾಕು ನಿಯಂತ್ರಣ ಕಾಯ್ದೆ ಕೋಟ್ಪಾ-2003ರ ಕುರಿತು ಮಾಹಿತಿ ನೀಡಿದರು.

ಆಪ್ತ ಸಮಾಲೋಚಕರಾದ ರೇಷ್ಮಾ ಬೇಗಂ ನದಾಫ್ ತಂಬಾಕು ವ್ಯಸನದಿಂದ ಮುಕ್ತವಾಗಲು ಮಲ್ಲಸಮುದ್ರದ ಗದಗ ಜಿಲ್ಲಾ ಆಸ್ಪತ್ರೆಯ ರೂಮ್ ನಂ 182ರಲ್ಲಿ ಲಭ್ಯವಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಗಣೇಶ ಬಿ ಕ್ಷಯ ರೋಗದ ಕುರಿತು ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಎಲ್ಲಾ ಪೌರ ಕಾರ್ಮಿಕ ಸಿಬ್ಬಂದಿಗಳಿಗೆ ಬಾಯಿ ಕ್ಯಾನ್ಸರ್, ಹೈಪರ್ ಟೆನ್ಷನ್, ಸಕ್ಕರೆ ಕಾಯಿಲೆ ತಪಾಸಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಡಾ. ರವಿ ಕಡಗಾವಿ, ಡಾ. ಮಹೇಶ, ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಎಂ.ಎಂ. ಮಕಾಂದಾರ, ಹಿ.ಆ. ನಿರೀಕ್ಷಣಾಧಿಕಾರಿ ವೈ.ಎನ್. ಕಡೆಮನಿ, ಡಾ. ಸೌಮ್ಯ, ಡಾ. ಬಸವರಾಜ ಶೆಟ್ಟರ್, ಡಾ. ಮಂಜುನಾಥ, ಪ್ರವೀಣ, ಸಾಮಾಜಿಕ ಕಾರ್ಯಕರ್ತೆ ಬಸಮ್ಮ ಚಿತ್ತರಗಿ, ಶಿವಕುಮಾರ ಬಗಾಡೆ, ಪೈಯಾಜ್ ಮಕಾಂದಾರ ಉಪಸ್ಥಿತರಿದ್ದರು.

ಗದಗ-ಬೆಟಗೇರಿ ನಗರಸಭೆಯ ಪರಿಸರ ಅಭಿಯಂತರ ಆನಂದ ಬದಿ ಮಾತನಾಡಿ, ಪೌರ ಕಾರ್ಮಿಕ ಸಿಬ್ಬಂದಿಗಳಿಗೆ ಈ ರೀತಿಯ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಬಹಳ ಅವಶ್ಯಕ ಹಾಗೂ ಉಪಯುಕ್ತವಾಗಿದ್ದು, ಎಲ್ಲ ಪೌರ ಕಾರ್ಮಿಕ ಸಿಬ್ಬಂದಿಗಳು ಕಾರ್ಯಕ್ರಮವನ್ನು ಸದುಪಯೋಗ ಪಡೆದು ಕಾರ್ಯಕ್ರಮ ಯಶಸ್ವಿಗೊಳಿಸಲು ತಿಳಿಸಿದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!