HomeGadag Newsಪರಿಸರ ಕಾಯ್ದರೆ ಭವಿಷ್ಯ ಸಮೃದ್ಧ

ಪರಿಸರ ಕಾಯ್ದರೆ ಭವಿಷ್ಯ ಸಮೃದ್ಧ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ತಾಯಿಯ ನಾಮದಲ್ಲಿ ಸಸಿ ನೆಡುವ ಮೂಲಕ ಪರಿಸರ ಬೆಳೆಸುವ ಈ ಅಭಿಯಾನ ಇತಿಹಾಸದಲ್ಲಿ ಉಳಿಯಲಿದೆ. ಅಭಿಯಾನ ಹಾಗೂ ತದನಂತರ ಎಲ್ಲರೂ ತಮ್ಮ ತಮ್ಮ ಮನೆಯೆದುರು ಸಸಿ ನೆಡುವ ಮೂಲಕ ನೆಡುತೋಪು ಸೃಷ್ಟಿಸಿ ಪೋಷಣೆಯ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಮುಂಡರಗಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಹೊಸಮನಿ ಹೇಳಿದರು.

ಡಂಬಳ ಹೋಬಳಿಯ ಡೋಣಿ ತಾಂಡಾ ಗ್ರಾಮದಲ್ಲಿ `ತಾಯಿಯ ಹೆಸರಲ್ಲಿ ಒಂದು ವೃಕ್ಷ’ ವಿಶೇಷ ಅಭಿಯಾನದಡಿ ಸಸಿ ನೆಟ್ಟು ಅವರು ಮಾತನಾಡಿದರು.

ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನ ಮಂತ್ರಿಯವರು `ತಾಯಿಯ ಹೆಸರಲ್ಲಿ ಒಂದು ವೃಕ್ಷ’ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಇದೀಗ ನರೇಗಾ ಯೋಜನೆಯಡಿ ಅರಣ್ಯ ಇಲಾಖೆ, ತೋಟಗಾರಿಕೆ ಇಲಾಖೆ ಒಗ್ಗೂಡಿಸುವಿಕೆಯೊಂದಿಗೆ ಈ ಅಭಿಯಾನವನ್ನು ತಾಲೂಕಿನ 19 ಗ್ರಾಮ ಪಂಚಾಯಿತಿಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. ತಾ.ಪಂ, ಗ್ರಾ.ಪಂ, ಶಾಲೆ, ಆಸ್ಪತ್ರೆ, ಕಾಲೇಜು ಆವರಣ ಸೇರಿದಂತೆ ವಿವಿಧ ಸ್ಥಳದಲ್ಲಿ ಏಕಕಾಲಕ್ಕೆ ಸಸಿ ನೆಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಪ್ರಸ್ತುತ ನಗಕರೀಕರಣ, ಕೈಗಾರಿಕೀಕರಣದಿಂದ ಪರಿಸರ ನಾಶವಾಗುತ್ತಿದೆ. ಇದು ಮನುಕುಲದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ.

ಹೀಗೆ ಮುಂದುವರೆದರೆ ಶುದ್ಧ ಗಾಳಿ-ನೀರಿಗೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಬಹುದು. ಆದ್ದರಿಂದ ದೇಶದೆಲ್ಲೆಡೆ ಅರಣ್ಯ ಪ್ರದೇಶ ಅಭಿವೃದ್ಧಿಗೆ ಸಾಕಷ್ಟು ಕ್ರಮ ವಹಿಸಲಾಗಿದೆ. ಇದೀಗ ಈ ಅಭಿಯಾನದ ಮೂಲಕ ಮತ್ತೊಂದು ಹೆಜ್ಜೆ ಮುಂದಿಟ್ಟು, ಪರಿಸರದ ಕುರಿತು ಜನ ಜಾಗೃತಿ ಮೂಡಿಸುವುದರ ಜೊತೆಗೆ ಅರಣ್ಯ ಪ್ರದೇಶ ಹೆಚ್ಚಿಸುವ ಗುರಿ ಹೊಂದಲಾಗಿದೆ. ಹೀಗಾಗಿ ತಾಯಿಯ ಹೆಸರಲ್ಲಿ ನೆಡುತೋಪು ಮಾಡಿರುವ ಈ ಸಸಿಗಳನ್ನು ನಾವೆಲ್ಲರೂ ಪೋಷಣೆ ಮಾಡೋಣ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಸಾಮಾಜಿಕ ವಲಯ ಅರಣ್ಯಾಧಿಕಾರಿ ಸುನೀತಾ, ಪರಿಸರ ಕಾರ್ಯಕರ್ತ ಶಂಕರ ಜಾಯನಗೌಡರ, ತೋಟಗಾರಿಕೆ ಇಲಾಖೆ ಅಧಿಕಾರಿಗಳಾದ ಮೈಲಾರೆಪ್ಪ, ಸುರೇಶ ಕುಂಬಾರ ಹಾಗೂ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಇದ್ದರು.

ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಎಂ.ಎಂ. ತಾಂಬೋಟಿ ಮಾತನಾಡಿ, ಕಾಡು ಬೆಳೆಸಿ, ನಾಡು ಉಳಿಸಿ ಎಂಬ ಘೋಷ ವಾಕ್ಯ ಕೇವಲ ಘೋಷಣೆಗೆ ಸೀಮಿತವಾಗಬಾರದು. ಮನೆಯಂಗಳದ ಜೊತೆಗೆ ಸುತ್ತಮುತ್ತಲಿನ ಪ್ರದೇಶ ಹಾಗೂ ತಮ್ಮ ಜಮೀನುಗಳಲ್ಲಿ ಸಸಿಗಳನ್ನು ನೆಟ್ಟು ಪೋಷಣೆ ಮಾಡಬೇಕು. ಸಸಿಗಳನ್ನು ಮರಗಳನ್ನಾಗಿಸಿದರೆ ಅದರಿಂದ ಸಾಕಷ್ಟು ಪ್ರಯೋಜನಗಳು ಲಭಿಸಲಿವೆ ಎಂದರು.

 

LEAVE A REPLY

Please enter your comment!
Please enter your name here

E-Paper

E-paper

Must Read

spot_img