ವಿಜಯಸಾಕ್ಷಿ ಸುದ್ದಿ, ಮುಳಗುಂದ : ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಗದಗ ಗ್ರಾಮೀಣ ಸಮನ್ವಯಾಧಿಕಾರಿ ಜಿ.ಎ. ಭಾವಿಕಟ್ಟಿ ಅಭಿಪ್ರಾಯಪಟ್ಟರು.
ಅವರು ಪಟ್ಟಣದ ಸರಕಾರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮುಳಗುಂದ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದ ಧ್ವಜಾರೋಹಣ ನೆರೆವೇರಿಸಿ ಮಾತನಾಡಿ, ಪ್ರೌಢ ಹಂತದಲ್ಲಿ ಮಕ್ಕಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಉತ್ತಮ ಭವಿಷ್ಯಕ್ಕೆ ಸಹಕರಿಯಾಗಲಿದೆ.
ಕ್ರೀಡಾ ಕ್ಷೇತ್ರದಲ್ಲಿ ಸಾಕಷ್ಟು ಕ್ರೀಡಾಪಟುಗಳು ಸಾಧನೆ ಮಾಡಿದ್ದು, ಉತ್ತಮ ಸಾಧನೆಗೈಯುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಂಡಿದ್ದಾರೆ ಎಂದರು.
ಶಾಲಾ ಪ್ರಧಾನ ಗುರು ಎಚ್.ಆರ್. ಸಕ್ರಿ ಕ್ರೀಡಾ ಜ್ಯೋತಿ ಬೆಳಗಿಸಿ ಮಾತನಾಡಿ, ಪ್ರತಿಯೊಬ್ಬರೂ ಕ್ರೀಡಾಕೂಟದಲ್ಲಿ ಭಾಗವಹಿಸುವುದು ಮುಖ್ಯವಾಗಿದ್ದು, ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು.
ಕ್ರೀಡೆಯಿಂದ ಭವಿಷ್ಯದಲ್ಲಿ ಸಾಕಷ್ಟು ಅವಕಾಶಗಳು ದೊರೆಯುತ್ತವೆ. ಇದರಿಂದ ಮುಂದಿನ ಜೀವನಕ್ಕೆ ಸಹಕಾರಿಯಾಗುತ್ತದೆ ಎಂದರು.
ಗದಗ ಗ್ರಾಮೀಣ ದೈಹಿಕ ಪರಿವೀಕ್ಷಕ ಪವಾರ, ಎಸ್.ಎಫ್. ಗಡಾದ, ವಿ.ಡಿ. ಕಣವಿ, ಶಿಕ್ಷಕ ಮುಶಣ್ಣವರ, ಎನ್.ವಾಯ್. ಸಂಗೊಂದಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.