ವಿಜಯಸಾಕ್ಷಿ ಸುದ್ದಿ, ನರೇಗಲ್ : ಸಮೀಪದ ನಿಡಗುಂದಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ತಾಲೂಕು ಪಂಚಾಯತ್, ಅರಣ್ಯ ಇಲಾಖೆ, ಗ್ರಾಮ ಪಂಚಾಯತ್ ಸಹಯೋಗದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ `ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ಅಭಿಯಾನ’ ಕಾರ್ಯಕ್ರಮಕ್ಕೆ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಬಡಿಗೇರ ಚಾಲನೆ ನೀಡಿದರು.
ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಬಡಿಗೇರ ಮಾತನಾಡಿ, ಪರಿಸರ ನಾಶದಿಂದ ಪ್ರಕೃತಿ ವಿಕೋಪಗಳು ಹೆಚ್ಚಾಗುತ್ತಿದ್ದು, ಮನುಷ್ಯನ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಅದನ್ನು ತಪ್ಪಿಸಲು ಪರಿಸರ ರಕ್ಷಣೆಗೆ ಮುಂದಾಗಬೇಕಾಗಿದೆ. ಆ ನಿಟ್ಟಿನಲ್ಲಿ ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ಅಭಿಯಾನ ದೇಶಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ. ಪ್ರತಿಯೊಬ್ಬರೂ ತಮ್ಮ ತಾಯಿಯ ಹೆಸರಿನಲ್ಲಿ ಒಂದು ಸಸಿ ನೆಟ್ಟು ಅವುಗಳನ್ನು ಪೋಷಿಸಿ ಬೆಳೆಸುವ ಮೂಲಕ ಪರಿಸರ ರಕ್ಷಣೆಯ ಮುಂದಾಗಬೇಕು ಎಂದರು.
ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿ ರಾಮಣ್ಣ ಪೂಜಾರ ಮಾತನಾಡಿ, ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನ ಮಂತ್ರಿಯವರ ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ಅಭಿಯಾನ ಹಮ್ಮಿಕೊಳ್ಳಲು ಕರೆ ನೀಡಿದ್ದು, ಅದರಂತೆ ದೇಶಾದ್ಯಂತ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ಗೀತಾ ಕುಕನೂರು, ಮರ್ತುಜಾ ಮುಲ್ಲಾ, ಅಂದಪ್ಪ ಚಲವಾದಿ, ಪಿಡಿಒ ಅಮರೇಶ ಮೂಲಿಮನಿ, ಕಾರ್ಯದರ್ಶಿ ಶರಣಪ್ಪ ಮೇಟಿ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರೇಖಾ ಹೊಸಮನಿ, ಅಂದಪ್ಪ ಬಿಚ್ಚೂರು, ಗೋವಿಂದ ಪೂಜಾರ, ರಮೇಶ ಸೇಬಗೊಂಡ, ಹೊನ್ನಪ್ಪ ಕಂಬಳಿ, ಶರಣಪ್ಪ ಗಡಾದ, ಜಗದೀಶ, ಅರಣ್ಯ ಇಲಾಖೆ, ಆರೋಗ್ಯ ಇಲಾಖೆ, ಗ್ರಾ.ಪಂ ಸಿಬ್ಬಂದಿಗಳು ಇದ್ದರು.