ರಾಜಭವನದ ಜೊತೆಗೆ ರಾಷ್ಟ್ರಪತಿ ಭವನ ಚಲೋ ಕೂಡ ಮಾಡಲಿ: ಹೆಚ್.ಡಿ.ಕುಮಾರಸ್ವಾಮಿ

0
Spread the love

ಮಂಡ್ಯ: ಕಾಂಗ್ರೆಸ್ ನಾಯಕರು 30ನೇ ತಾರೀಖು ರಾಜಭವನ ಚಲೋ ಮಾಡುತ್ತಿರುವುದಕ್ಕೆ ಬಹಳ ಸಂತೋಷ. ಅವರು ರಾಜಭವನದ ಜೊತೆಗೆ ರಾಷ್ಟ್ರಪತಿ ಭವನ ಚಲೋ ಕೂಡ ಮಾಡಲಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮನೆಗೆ ಕೂಡ ಹೋಗಲಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಮಂಡ್ಯ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು.

Advertisement

ಕಾಂಗ್ರೆಸ್ ನಾಯಕರು 30ನೇ ತಾರೀಖು ರಾಜಭವನ ಚಲೋ ಮಾಡುತ್ತಿರುವುದಕ್ಕೆ ಬಹಳ ಸಂತೋಷ. ಅವರು ರಾಜಭವನದ ಜೊತೆಗೆ ರಾಷ್ಟ್ರಪತಿ ಭವನ ಚಲೋ ಕೂಡ ಮಾಡಲಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮನೆಗೆ ಕೂಡ ಹೋಗಲಿ. ಸತ್ತಿರುವ ವಿಚಾರ ಇಟ್ಟುಕೊಂಡು ನನ್ನ ಬಗ್ಗೆ ಮಾತನಾಡುತ್ತಿದ್ದಾರೆ. ಮಹಾನ್ ಅಪರಾಧ ಮಾಡಿದ್ದಾರೆ ಎನ್ನುತ್ತಿದ್ದಾರೆ. ನಾನೇ ಕೈ ಜೋಡಿಸಿ ಮನವಿ ಮಾಡುತ್ತೇನೆ. ರಾಜ್ಯಪಾಲರ ಅನುಮತಿ ಪಡೆದು ತನಿಖೆ ಮಾಡಲಿ ಎಂದು ಸಚಿವರು ಸವಾಲು ಹಾಕಿದರು.

ಇನ್ನೂ ಮಂತ್ರಿಗಳ ಲೆಟರ್ ಪ್ಯಾಡ್ ನಲ್ಲಿ ಈ ಜನ ಏನೆಲ್ಲಾ ದುರುಪಯೋಗ ಪಡಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಎಲ್ಲರಿಗೂ ಇದೆ. ಮುಡಾ ದಾಖಲೆಗಳಲ್ಲಿ ಸಹಿ ವ್ಯತ್ಯಾಸ ಜನ ಮಾತನಾಡುತ್ತಿದ್ದಾರೆ. ಈ ಹಗರಣದಲ್ಲಿ ಆಗಿರುವ ಬೆಳವಣಿಗೆ ಬಗ್ಗೆ ಟಾರ್ಚ್ ಹಾಕಿ ನೋಡಿದರೂ ಅಷ್ಟೇ, ಹಾಕದೇ ನೋಡಿದರೂ ಅಷ್ಟೇ. ಅದು ಸರ್ಕಾರಿ ಭೂಮಿ. ಸರ್ಕಾರಿ ಭೂಮಿ ಲಪಟಾಯಿಸಿ ಮುಡಾ ಸೈಟ್ ಪಡೆದಿದ್ದಾರೆ. ಇದಕ್ಕೆ ಉತ್ತರ ಕೊಡಲಿ ಎಂದು ಅವರು ಒತ್ತಾಯ ಮಾಡಿದರು.


Spread the love

LEAVE A REPLY

Please enter your comment!
Please enter your name here