ಬೆಂಗಳೂರು:- ಕರ್ನಾಟಕದ 14 ಜಿಲ್ಲೆಗಳಲ್ಲಿ ಒಂದು ವಾರ ಧಾರಾಕಾರ ಮಳೆ ಆಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಎಚ್ಎಎಲ್ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 28.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.