HomePolitics Newsಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಾಗಿದೆ: ಬಿ.ವೈ.ವಿಜಯೇಂದ್ರ

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಾಗಿದೆ: ಬಿ.ವೈ.ವಿಜಯೇಂದ್ರ

For Dai;y Updates Join Our whatsapp Group

Spread the love

ಬೆಂಗಳೂರು: ದುಷ್ಟ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯ ಹೆಚ್ಚಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ದುಷ್ಟ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯ ಹೆಚ್ಚಾಗಿದೆ.

ರಾಜ್ಯದಲ್ಲಿ ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣದ ವಿರುದ್ಧ ಹೋರಾಟಗಳು ನಡೆದಿವೆ. ಮಹಿಳೆಯರ ಮೇಲಿನ ದೌರ್ಜನ್ಯದ ಸಂದರ್ಭದಲ್ಲಿ ಮುಖ್ಯಮಂತ್ರಿ, ಗೃಹ ಸಚಿವ, ಸಚಿವರ ನಡವಳಿಕೆ ಪ್ರಮುಖವಾಗುತ್ತದೆ ಎಂದಿದ್ದಾರೆ.

ಇನ್ನೂ ರಾಜ್ಯದ ಜನರು ಈ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ವಿಪಕ್ಷವಾಗಿದ್ದಾಗ ಹೋರಾಟಗಳು ಅನಿವಾರ್ಯ, ಚುನಾವಣೆ ಬಂದಾಗ ಮಾತ್ರ ಹೋರಾಟ ಮಾಡಿದರೆ ಅದು ಜನತೆಗೆ ಮಾಡಿದ ಅವಮಾನ ಮತ್ತು ಅನ್ಯಾಯ. ರಾಜ್ಯದ ಚುಕ್ಕಾಣಿ ಹಿಡಿದ ಸರ್ಕಾರ ಜನವಿರೋಧಿ ನೀತಿಗಳನ್ನು ಅನುಸರಿಸುತ್ತದೋ ಆಗ, ರಾಜ್ಯದ ಜನರ ಪರವಾಗಿ ಹೋರಾಡುವುದು ನಮ್ಮ ಕರ್ತವ್ಯ ಎಂದು ಅವರು ಹೇಳಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!