ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅಕ್ರಮ ಆಸ್ತಿ ಪ್ರಕರಣದ ತನಿಖೆಯನ್ನು ಲೋಕಾಯುಕ್ತಕ್ಕೆ ನೀಡಿದ್ದನ್ನು ಪ್ರಶ್ನಿಸಿ ಸಿಬಿಐ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ.
ಹೈಕೋರ್ಟ್ ವಿಭಾಗೀಯ ಪೀಠದ ನ್ಯಾ.ಕೆ ಸೋಮಶೇಖರ್ & ನ್ಯಾ. ಉಮೇಶ್ ಅವರ ಪೀಠ ಇಂದು ಸಿಬಿಐ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ ನೀಡಿದೆ. ಹೈಕೋರ್ಟ್ ಆದೇಶದಿಂದ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಸಿಬಿಐ & ಯತ್ನಾಳ ಅರ್ಜಿಗಳನ್ನು ವಜಾ ಮಾಡಿದ ಹೈಕೋರ್ಟ್ ಅರ್ಜಿದಾರರು ಅಗತ್ಯವಿದ್ದರೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದೆ. ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರಿಂಕೋರ್ಟ್ಗೆ ಹೋಗಲಿದೆ. ಸಿಬಿಐ ಸುಪ್ರಿಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ತನಕ ಡಿಸಿಎಂ ಡಿಕೆ ಶಿವಕುಮಾರ್ ಬಿಗ್ ರಿಲೀಫ್ ಸಿಕ್ಕಿದೆ.