ಛಲವಾದಿ ನಾರಾಯಣಸ್ವಾಮಿ ಒಬ್ಬ ಶೆಡ್ ಗಿರಾಕಿ: ಎಂ.ಬಿ ಪಾಟೀಲ್ ವ್ಯಂಗ್ಯ!

0
Spread the love

ಬೆಂಗಳೂರು:- ಛಲವಾದಿ ನಾರಾಯಣಸ್ವಾಮಿ ಒಬ್ಬ ಶೆಡ್ ಗಿರಾಕಿ ಎಂದು ಎಂ.ಬಿ ಪಾಟೀಲ್ ವ್ಯಂಗ್ಯವಾಗಿದ್ದಾರೆ.

Advertisement

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ಅವರ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಏರೋಸ್ಪೇಸ್ ಪಾರ್ಕಿನಲ್ಲಿ 5 ಎಕರೆ ಸಿ.ಎ. ನಿವೇಶನ ಕೊಟ್ಟಿದ್ದಕ್ಕೆ ಎಗರಾಡುತ್ತಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸತ್ಯ ಹರಿಶ್ಚಂದ್ರರೇನಲ್ಲ.

2006ರಲ್ಲಿ ಮೈಸೂರಿನ ಹೆಬ್ಬಾಳದಲ್ಲಿ 2 ಎಕರೆ ಜಾಗ ಪಡೆದುಕೊಂಡಿರುವ ಅವರು 18 ವರ್ಷಗಳಾದರೂ ಅಲ್ಲಿ ಏನೂ ಮಾಡದೇ ಕಾಟಾಚಾರಕ್ಕೆ ಒಂದು ಶೆಡ್ ಹಾಕಿಕೊಂಡು ಕೂತಿರುವ ಆಸಾಮಿ. ಅವರೊಬ್ಬ ಶೆಡ್ ಗಿರಾಕಿಯೇ ವಿನಾ ರಾಹುಲ್ ಖರ್ಗೆ ಅವರಂತೆ ಉದ್ಯಮಶೀಲರಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌ ಆಕ್ರೋಶ ವ್ಯಕ್ತಪಡಿಸಿದರು.

ರಾಹುಲ್ ಖರ್ಗೆ ಎರಡು ಬಾರಿ ಯುಪಿಎಸ್ಸಿ ಪರೀಕ್ಷೆ ಪಾಸು ಮಾಡಿದ್ದಾರೆ. ಎಂಜಿನಿಯರಿಂಗ್ ಪದವೀಧರರು, ಡಿಆರ್‌ಡಿಓ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಇಂಥ ಅರ್ಹರಿಗೆ ಸಿ.ಎ. ನಿವೇಶನ ಕೊಡದೇ ಬಿಜೆಪಿಯವರಂತೆ ನಿಯಮಗಳನ್ನು ಗಾಳಿಗೆ ತೂರಿ ಯಾರಿಗೆ ಬೇಕೋ ಅವರಿಗೆ ಕೊಡಬೇಕಾಗಿತ್ತೇನು? ನಾರಾಯಣಸ್ವಾಮಿ ಈಗ ತಮಗೆ ಮಂಜೂರಾಗಿರುವ ಕೈಗಾರಿಕಾ ನಿವೇಶನದ ಸಮರ್ಪಕ ಬಳಕೆಗೆ ಮತ್ತೊಮ್ಮೆ 6 ತಿಂಗಳ ಕಾಲಾವಕಾಶ ಪಡೆದುಕೊಂಡಿದ್ದಾರೆ. ಇಲ್ಲೂ ಅವರು ವಿಫಲರಾದರೆ, ನಿಯಮಗಳ ಪ್ರಕಾರ ಆ ಜಮೀನನ್ನು ಸರ್ಕಾರದ ವಶಕ್ಕೆ ಪಡೆಯುತ್ತೇವೆ ಎಂದು ಎಚ್ಚರಿಕೆ ನೀಡಿದರು.

ದಲಿತರಾದ ನಾರಾಯಣಸ್ವಾಮಿ ಸ್ವತಃ ತಮ್ಮ ಸಮುದಾಯದ ಹಿರಿಯರೂ ಮುತ್ಸದ್ದಿಗಳೂ ಆದ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ವಿರುದ್ಧ ವಿನಾ ಕಾರಣ ಆರೋಪ ಮಾಡುತ್ತಿದ್ದಾರೆ. ಇದು ಬಿಜೆಪಿಯ ಕುತಂತ್ರ. ದಲಿತರು ಪರಸ್ಪರ ಹೊಡೆದಾಡುತ್ತಿದ್ದರೆ ಅವರಿಗೆ ಲಾಭವಿದೆ.

ತಮಗೆ ನೀಡಿರುವ ಕೈಗಾರಿಕಾ ನಿವೇಶನದಲ್ಲಿ ನಾರಾಯಣಸ್ವಾಮಿ ಇಷ್ಟು ಹೊತ್ತಿಗೆ ಶೇ.51ರಷ್ಟು ಭೂಮಿಯ ಬಳಕೆ ಮಾಡಿಕೊಳ್ಳಬೇಕಾಗಿತ್ತು. ಆದರೆ ಅವರು ಕೇವಲ ಶೇ.5ರಷ್ಟು ಭೂಮಿಯಲ್ಲಿ ಕಾಟಾಚಾರಕ್ಕೆ ಶೆಡ್ ಹಾಕಿ, `ಬಾಡಿಗೆಗೆ ಇದೆ’ ಎಂದು ಬೋರ್ಡ್ ನೇತು ಹಾಕಿದ್ದಾರೆ. ಇಂಥ ಲಜ್ಜೆಗೆಟ್ಟ ವ್ಯಕ್ತಿ ದೇಶದ ನೇತಾರರಲ್ಲಿ ಒಬ್ಬರಾದ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಮಾತನಾಡುವ ದುಸ್ಸಾಹಸ ಮಾಡುತ್ತಿದ್ದಾರೆ ಎಂದು ಅವರು ಹರಿಹಾಯ್ದರು.


Spread the love

LEAVE A REPLY

Please enter your comment!
Please enter your name here