ಬೆಂಗಳೂರು:-ಕರ್ನಾಟಕದಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ ಆಗಿದ್ದು, ಇನ್ನಷ್ಟು ಹೆಚ್ಚಳ ಆಗುವ ಸಾಧ್ಯತೆ ಇದೆ.
ಒಂದು ಕೆಜಿ ಈರುಳ್ಳಿಯ ಬೆಲೆ 60-70 ರೂಪಾಯಿ ಆಗಿದೆ. ಹಬ್ಬದ ವೇಳೆಗೆ ಈರುಳ್ಳಿಯ ಬೆಲೆ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ.
ಈ ಹಿಂದೆ ಉತ್ತರ ಕರ್ನಾಟಕ ಭಾಗದಿಂದ ರಾಜ್ಯಕ್ಕೆ ಈರುಳ್ಳಿ ಪೂರೈಕೆಯಾಗುತ್ತಿತ್ತು. ಆದರೆ, ಉತ್ತರ ಕರ್ನಾಟಕದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಪರಿಣಾಮವಾಗಿ ಈರುಳ್ಳಿ ಬೆಳೆ ಕೊಳೆತು ಹೋಗುತ್ತಿದೆ. ಹೀಗಾಗಿ ಈರುಳ್ಳಿ ಪೂರೈಕೆ ಕಡಿಮೆಯಾಗಿದೆ.
ಯಶವಂತಪುರ ಹಾಗೂ ದಾಸನಪುರ ಎಪಿಎಂಸಿಗೆ ಬುಧವಾರ 127 ಲಾರಿಗಳಲ್ಲಿ 38,415 ಚೀಲ ಈರುಳ್ಳಿ ಆವಕವಾಗಿತ್ತು. ಇದರಲ್ಲಿ ರಾಜ್ಯದ ಹತ್ತಿಪ್ಪತ್ತು ಲಾರಿಗಳು ಮಾತ್ರ ಸೇರಿವೆ. ಉಳಿದವೆಲ್ಲ ಪೂನಾದಿಂದ ಬಂದಿವೆ. ಸಗಟು ದರ ಕ್ವಿಂಟಲ್ಗೆ ಕನಿಷ್ಠ 2 ಸಾವಿರದಿಂದ ಗರಿಷ್ಠ 4500 ರೂ. ಇತ್ತು. ನಗರದ ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿಗೆ 55ರಿಂದ 60 ರೂ.ಗೆ ಮಾರಾಟವಾಗಿದೆ.