ರಾಜ್ಯಕ್ಕೆ ಹೊಸ ಸಿಎಂ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು.!

0
Spread the love

ಹುಬ್ಬಳ್ಳಿ: ಕಾಂಗ್ರೆಸ್ ಸಚಿವರು, ಶಾಸಕರು ಹಾಗೂ ಸಂಸದರು ಸೇರಿಕೊಂಡು ಶನಿವಾರ ರಾಜ್ಯಪಾಲರನ್ನು ಭೇಟಿಯಾಗಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

Advertisement

ಕಾಂಗ್ರೆಸ್ ಸಚಿವರು, ಶಾಸಕರು ಹಾಗೂ ಸಂಸದರು ಸೇರಿಕೊಂಡು ಶನಿವಾರ ರಾಜ್ಯಪಾಲರನ್ನು ಭೇಟಿಯಾಗಲಿದ್ದೇವೆ. ಎಚ್.ಡಿ.ಕುಮಾರಸ್ವಾಮಿ, ಮುರುಗೇಶ ನಿರಾಣಿ ಹಾಗೂ ಜನಾರ್ಧನ ರಡ್ಡಿ ಅವರ ಮೇಲಿರುವ ಪ್ರಾಸಿಕ್ಯೂಷನ್ ತನಿಖೆಗೆ ಆಗ್ರಹಿಸಲಾಗುವುದು.

ಈ ಪ್ರಕರಣಗಳಲ್ಲೂ ದೋಶಾರೋಪಣ ಪಟ್ಟಿ ಸಲ್ಲಿಕೆಯಾಗಿ ತನಿಖೆಯೂ ಪೂರ್ಣಗೊಂಡಿದೆ. ನಮ್ಮ ಪ್ರಕರಣದಲ್ಲಿ ಯಾವುದೇ ವಿಚಾರಣೆ ಆಗಿಲ್ಲ. ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿದರೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸರ್ಕಾರವನ್ನು ಅಸ್ಥಿರ ಗೊಳಿಸುವ ಪ್ರಯತ್ನದಲ್ಲಿದ್ದಾರೆ ಎಂಬುದು ಸ್ಪಷ್ಟ ಎಂದರು.

ಇನ್ನೂ ರಾಜ್ಯಕ್ಕೆ ಹೊಸ ಸಿಎಂ ಬರಲಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಅವರು ರಾಜೀನಾಮೆಗೆ ಆಗ್ರಹಿಸಿದ ಕೂಡಲೇ ಕೊಡೋಕೆ ಆಗೋದಿಲ್ಲ. ವಿಜಯೇಂದ್ರ ರಾಜೀನಾಮೆ ನೀಡುವಂತೆ ನಾನೂ ಆಗ್ರಹಿಸುತ್ತೇನೆ. ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಅವರು ರಾಜೀನಾಮೆ ಕೊಡ್ತಾರಾ ಎಂದು ಪ್ರಶ್ನಿಸಿದರು. ಅಲ್ಲದೆ, ಪ್ರಾಸಿಕ್ಯೂಷನ್ ವಿಚಾರವಾಗಿ ನಾಳೆ ವಿಚಾರಣೆ ನಡೆಯಲಿದೆ. ಹೈಕೋರ್ಟ್ ತೀರ್ಮಾನ ಏನೆಂಬುದು ಸ್ಪಷ್ಟವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here