ಧಾರವಾಡ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಯಲ್ಲಿನ 2,500 ನಿರ್ವಾಹಕ ಹುದ್ದೆಗಳಿಗೆ ಇಂದು ರಾಜ್ಯದ ಆರು ಜಿಲ್ಲೆಗಳ 50 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಧಾರವಾಡದ ಬಾಷೆಲ್ ಮಿಷನ್ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷಾ ಕೇಂದ್ರದಲ್ಲಿ ಕಾಪಿ ಚೀಟಿ ಪತ್ತೆ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಪರೀಕ್ಷಾ ಕೇಂದ್ರಕ್ಕೆ ಧಾರವಾಡ ಶಹರ್ ಠಾಣೆಯ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆಹಾಕುತ್ತಿದ್ದಾರೆ.
Advertisement
ಈ ಪರೀಕ್ಷೆಗೆ 23,000 ಮಂದಿ ಅರ್ಜಿ ಸಲ್ಲಿಸಿದ್ದರು. ಅಭ್ಯರ್ಥಿಗಳಿಗೆ ಡ್ರೆಸ್ ಕೋಡ್ ಇದ್ದು ಆ ಪ್ರಕಾರವೇ ಎಲ್ಲರೂ ಪರೀಕ್ಷೆಗೆ ಹಾಜರಾಗಬೇಕು ಎಂದು ಅವರು ಸೂಚಿಸಿದ್ದರು. ಬೆಂಗಳೂರು, ಬಳ್ಳಾರಿ, ಧಾರವಾಡ, ಕಲ್ಬುರ್ಗಿ, ದಾವಣಗೆರೆ, ಮಂಡ್ಯ ಜಿಲ್ಲೆಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಪತ್ರಿಕೆಗಳಿಗೆ ಪರೀಕ್ಷೆ ನಡೆಯುತ್ತಿದೆ.