Sexual assault case: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲಗೆ ಜಾಮೀನು!

0
Spread the love

ಮಂಗಳೂರುಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಎಫ್ ಐಆರ್ ದಾಖಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿರುವ ದಕ್ಷಿಣ ಕನ್ನಡ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಜೆಎಂಎಫ್​ಸಿ ಕೋರ್ಟ್​ನಿಂದ ಜಾಮೀನು ಮಂಜೂರಾಗಿದೆ.

Advertisement

ಪ್ರಕರಣ ಸಂಬಂಧ ಅರುಣ್ ಕುಮಾರ್ ಪುತ್ತಿಲ ಸೋಮವಾರ ವಕೀಲರ ಮೂಲಕ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಪುತ್ತಿಲ ಪರ ವಕೀಲರ ವಾದ ಪುರಸ್ಕರಿಸಿ ಜಾಮೀನು ನೀಡಿದೆ. 2023 ಜೂನ್​ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್​ನಲ್ಲಿ ದೌರ್ಜನ್ಯ ನಡೆಸಿದ್ದಾಗಿ ಸಂತ್ರಸ್ತೆ ಆರೋಪಿಸಿದ್ದರು.


Spread the love

LEAVE A REPLY

Please enter your comment!
Please enter your name here