ಬೆಂಗಳೂರು:- ಮುಡಾ ಹಗರಣದಲ್ಲಿ ಮೊದಲ ತಲೆದಂಡ ಆಗಿದ್ದು, ರಾಜ್ಯಪಾಲರ ಆದೇಶಾನುಸಾರ ಹಿಂದಿನ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹಗರಣದ ಆರೋಪ ಹೊತ್ತಿರುವ ಮಧ್ಯ ಆಯುಕ್ತರಾಗಿದ್ದ ದಿನೇಶ್ ಕುಮಾರ್ ಅವರನ್ನು ರಾಜ್ಯ ಸರ್ಕಾರ, ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ಸರ್ಕಾರ ವರ್ಗಾಯಿಸಿತ್ತು. ಆದ್ರೆ, ಇದೀಗ ರಾಜ್ಯಪಾಲರ ಆದೇಶಾನುಸಾರವಾಗಿ ದಿನೇಶ್ ಕುಮಾರ್ ಅವರನ್ನ ಅಮಾನತುಗೊಳಿಸಲಾಗಿದೆ. ಸಸ್ಪೆಂಡ್ ಮಾಡಿ ಕಾರ್ಯದರ್ಶಿ ಉಮಾದೇವಿ ಅವರು ಇಂದು ಆದೇಶ ಹೊರಡಿಸಿದ್ದಾರೆ.



